ರಾಜ್ಯದಲ್ಲಿ ಮತ್ತೆ 4 ದಿನ ಭಾರಿ ಮಳೆ

rain
Published on

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ರಾಜ್ಯದ ವಿವಿಧೆಡೆ ಸುರಿಯುತ್ತಿರುವ ಮಳೆ ಮುಂದಿನ 4 ದಿನ ಮುಂದುವರಿಯಲಿದೆ. ಬುಧವಾರವೂ ವಿವಿಧ ಭಾಗಗಳಲ್ಲಿ ಮಳೆ ಸುರಿದಿದೆ. ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಅ.7ರಿಂದ ಅ.10ರವರೆಗೆ ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.

ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ, ದಕ್ಷಿಣ ಒಳನಾಡಿನ ಬೆಂಗಳೂರು, ಬೆಂ.ಗ್ರಾಮಾಂತರ, ಮೈಸೂರು, ರಾಮನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಮಂಡ್ಯ, ಕೋಲಾರ, ತುಮಕೂರು, ಬಳ್ಳಾರಿ, ದಾವಣಗೆರೆ ಹಾಗೂ ಉತ್ತರ ಒಳನಾಡಿನ ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಕೊಪ್ಪಳ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿಯಲ್ಲಿ ಅ.7, 8ರಂದು ಯೆಲ್ಲೋ ಅಲರ್ಟ್ ಇರಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

ವೆಬ್‌ಸೈಟ್ ಸ್ಥಗಿತ: ನೆಟ್‌ವರ್ಕ್ ಸಮಸ್ಯೆಯಿಂದ ರಾಜ್ಯದ ಹವಾಮಾನ ಇಲಾಖೆ ವೆಬ್‌ಸೈಟ್ ಸ್ಥಗಿತವಾಗಿತ್ತು. ಪ್ರತಿ ವರ್ಷ ಅಂದಾಜು 10ಕ್ಕಿಂತ ಹೆಚ್ಚು ಬಾರಿ ನೆಟ್‌ವರ್ಕ್ ಸಮಸ್ಯೆಯಿಂದಲೇ ಆಗಾಗ್ಗೆ ವೈಬ್‌ಸೈಟ್ ಕೈಕೊಡುತ್ತಿರುತ್ತದೆ. ಇಲಾಖೆ ಸದ್ಯ ಹೊಸ ವೈಬ್‌ಸೈಟ್ ಆರಂಭಿಸಿದೆ. ಯಾವ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಿದೆ ಎಂಬುದರ ಬಗ್ಗೆ ನಿಖರ ಮಾಹಿತಿಗಳನ್ನೂ ಅಧಿಕಾರಿಗಳು ಒದಗಿಸುವುದಿಲ್ಲ. ಇದರಿಂದ ಕೆಲವೊಮ್ಮೆ ಹವಾಮಾನ ಸಂಬಂಧಿಸಿದ ಮಾಹಿತಿ ಸಮರ್ಪಕವಾಗಿ ಸಿಗೋದಿಲ್ಲ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net