ನಾಳೆ ಹಲವೆಡೆ ಭಾರೀ ಮಳೆ: ಬೆಂಗಳೂರಲ್ಲಿ 2 ದಿನ ಮೋಡಕವಿದ ವಾತಾವರಣ

rain
Published on

ಬೆಂಗಳೂರು: ರಾಜ್ಯದ ಹಲವೆಡೆ ಇಂದು ಧಾರಾಕಾರ ಮಳೆಯಾಗಿದ್ದು, ನಾಳೆಯೂ(ಆ.31) ವ್ಯಾಪಕವಾಗಿ ಸುರಿಯಲಿದೆ.

ಕರಾವಳಿಯ ಉಡುಪಿ, ದಣ ಕನ್ನಡ, ಉತ್ತರ ಕನ್ನಡ, ಮಲೆನಾಡು ಭಾಗದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಉತ್ತರ ಒಳನಾಡಿನ ಯಾದಗಿರಿ, ವಿಜಯಪುರ, ರಾಯಚೂರು, ಕಲಬುರಗಿ ಮತ್ತು ಬೀದರ್​ನಲ್ಲಿ ಮುಂದಿನ 24 ಗಂಟೆ ವ್ಯಾಪಕ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್​​ ಘೋಷಿಸಿದೆ.

ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಮುಂದಿನ 2 ದಿನ ಮೋಡಕವಿದ ವಾತಾವರಣ ಇರಲಿದ್ದು, ಆಗಾಗ್ಗೆ ಚದುರಿದಂತೆ ಮಳೆ ಬೀಳಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net