

ಬೆಂಗಳೂರು: ರಾಜ್ಯದಲ್ಲಿ ಮುಂದಿನ 4 ದಿನ ಭಾರಿ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮಾಹಿತಿ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೆ ಸುಳಿಗಾಳಿ ಪರಿಣಾಮ ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಅ.24ರಂದು, ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು ಮತ್ತು ಹಾಸನದಲ್ಲಿ ಅ.24ರಿಂದ ಅ.27ರವರೆಗೆ ವ್ಯಾಪಕ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ದಕ್ಷಿಣ ಒಳನಾಡಿನ ಮೈಸೂರಿನಲ್ಲಿ ಮುಂದಿನ 48 ಗಂಟೆ ಹಾಗೂ ಚಾಮರಾಜನಗರದಲ್ಲಿ ಅ.25, 26ರಂದು ಯೆಲ್ಲೋ ಅಲರ್ಟ್ ಇರಲಿದೆ. ಉತ್ತರ ಒಳನಾಡಿನ ಸಾಧಾರಣ ಮಳೆ ಬೀಳಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.