ಮುತ್ತಪ್ಪ ರೈ ಆಸ್ತಿ ಮಾರಾಟಕ್ಕೆ ಹೈಕೋರ್ಟ್ ತಡೆಯಾಜ್ಞೆ

Muttappa Rai Feature
Published on

ಬೆಂಗಳೂರು: ಮಾಜಿ ಭೂಗತ ದೊರೆ, ಜಯ ಕರ್ನಾಟಕ ಸಂಘಟನೆ ಸಂಸ್ಥಾಪಕ ದಿ. ಮುತ್ತಪ್ಪ ರೈಗೆ ಸೇರಿದ ಕೆಲ ನಿರ್ದಿಷ್ಟ ಆಸ್ತಿಗಳ ಮಾರಾಟಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.

ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಸಿವಿಲ್ ಕೋರ್ಟ್ ನೀಡಿದ್ದ ಆದೇಶ ಪ್ರಶ್ನಿಸಿ ಮುತ್ತಪ್ಪ ರೈ ಅವರ ಎರಡನೇ ಪತ್ನಿ ಅನುರಾಧಾ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ಎಸ್ ಮುದಗಲ್ ಅವರಿದ್ದ ಪೀಠ, ಪ್ರಕರಣಕ್ಕೆ ಸಂಬಂಧಿಸಿದಂತೆ ಅರ್ಜಿದಾರರು ಆಕ್ಷೇಪಿಸಿರುವ ನಿರ್ದಿಷ್ಟ ಆಸ್ತಿಗಳನ್ನು ನ್ಯಾಯಾಲಯದ ಮುಂದಿನ ಆದೇಶದವರೆಗೆ ವರ್ಗಾವಣೆ ಮಾಡದಂತೆ ಮಧ್ಯಂತರ ಆದೇಶ ಮಾಡಿದೆ.

ಪತ್ರಿಕಾಗೋಷ್ಠಿಯಲ್ಲಿ ಮುತ್ತಪ್ಪ ರೈ
ಪತ್ರಿಕಾಗೋಷ್ಠಿಯಲ್ಲಿ ಮುತ್ತಪ್ಪ ರೈ

ಮತ್ತಪ್ಪ ರೈ ಎರಡನೇ ಪತ್ನಿ ಆಗಿರುವ ಅನುರಾಧಾ ಪತಿಯ ಆಸ್ತಿಯಲ್ಲಿ ಮೂರನೇ ಒಂದು ಪಾಲು ಕೋರಿ ಸಿವಿಲ್ ಕೋರ್ಟ್‌ನಲ್ಲಿ ದಾವೆ ಹೂಡಿದ್ದರು. ಈ ನಡುವೆ ಮುತ್ತಪ್ಪ ರೈ ಪುತ್ರರಾದ ರಾಕಿ ರೈ ಹಾಗೂ ರಿಕ್ಕಿ ರೈ ಕೆಲ ಆಸ್ತಿ ಮಾರಾಟ ಮಾಡಿದ್ದರು. ಆಸ್ತಿ ಮಾರಾಟ ಮಾಡದಂತೆ ನೀಡಿದ್ದ ತಡೆಯಾಜ್ಞೆಯನ್ನು ಸಿವಿಲ್ ಕೋರ್ಟ್ ಇತ್ತೀಚೆಗೆ ತೆರವು ಮಾಡಿತ್ತು. ಇದನ್ನು ಪ್ರಶ್ನಿಸಿ, ಅನುರಾಧಾ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಭೂಗತ ದೊರೆಯಾಗಿ ಅನೇಕರಲ್ಲಿ ನಡುಕ ಹುಟ್ಟಿಸಿದ್ದ ಮುತ್ತಪ್ಪ ರೈ
ಭೂಗತ ದೊರೆಯಾಗಿ ಅನೇಕರಲ್ಲಿ ನಡುಕ ಹುಟ್ಟಿಸಿದ್ದ ಮುತ್ತಪ್ಪ ರೈ

ಮಾಜಿ ಭೂಗತ ದೊರೆ ಮುತ್ತಪ್ಪ ರೈ ಅವರು 2020ರ ಮೇ ತಿಂಗಳಲ್ಲಿ ಕ್ಯಾನ್ಸರ್​ನಿಂದ ಮೃತಪಟ್ಟಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net