ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ಯುವಕ ಆತ್ಮಹತ್ಯೆ

suicide
Published on

ಗದಗ: ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ಯುವಕನೊಬ್ಬ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮುಂಡರಗಿ ತಾಲೂಕಿನ ಹಿರೇವಡ್ಡಟ್ಟಿ ಗ್ರಾಮದಲ್ಲಿ ಸಂಭವಿಸಿದೆ.

ಮಲ್ಲಪ್ಪ ಹೊಳಗುಂದಿ(28) ಮೃತ ದುರ್ದೈವಿ. ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ವಾಟರ್​ಮನ್ ಆಗಿ ಕೆಲಸ ಮಾಡುತ್ತಿದ್ದ ಮಲ್ಲಪ್ಪನನ್ನು ಇತ್ತೀಚಿಗೆ ಕೆಲಸದಿಂದ ತೆಗೆದು ಹಾಕಲಾಗಿತ್ತು. ಇದೇ ವಿಚಾರಕ್ಕೆ ಮನನೊಂದಿಗೆ ಮಲ್ಲಪ್ಪ, ಪಂಚಾಯಿತಿ ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡು ಸತ್ತಿದ್ದಾನೆ. ಮುಂಡರಗಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net