ತೋಟದಲ್ಲಿ ಹೆಜ್ಜೇನು ದಾಳಿ: ರೈತ ಸಾವು

New Project(2)
Published on

ದೊಡ್ಡಬಳ್ಳಾಪುರ: ತೋಟಕ್ಕೆ ಹೋಗಿದ್ದ ರೈತನ ಮೇಲೆ ಹೆಜ್ಜೇನು ದಾಳಿ ಮಾಡಿದ್ದು, ಗಂಭೀರ ಗಾಯಗೊಂಡ ರೈತ ಮೃತಪಟ್ಟ ಘಟನೆ ಗುರುವಾರ ಸಂಭವಿಸಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಚೆನ್ನಾದೇವಿ ಅಗ್ರಹಾರ ಗ್ರಾಮದ ರಂಗನಾಥ್(65) ಮೃತರು.

ಗುರುವಾರ ಮಧ್ಯಾಹ್ನ ತೋಟಕ್ಕೆ ಕೆಲಸದ ನಿಮಿತ್ತ ಹೋಗಿದ್ದರು. ಈ ವೇಳೆ ಹೆಜ್ಜೇನುಗಳು ದಾಳಿ ಮಾಡಿವೆ. ಗಂಭೀರ ಸ್ಥಿತಿಯಲ್ಲಿದ್ದ ರಂಗನಾಥ್​ ಅವರನ್ನು ಸ್ಥಳೀಯರು ಆಸ್ಪತ್ರೆಗೆ ಕರೆದೊಯ್ದರಾದರೂ ಮಾರ್ಗಮಧ್ಯೆಯೇ ಕೊನೆಯುಸಿರೆಳೆದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net