ಭಾರತೀಯ ಸೇನಾ ಹೆಲಿಕಾಪ್ಟರ್​ ಪತನ: ಓರ್ವ ಪೈಲಟ್​ ಸಾವು, ಮತ್ತೊಬ್ಬರ ಸ್ಥಿತಿ ಚಿಂತಾಜನಕ

helicopter
Published on

ಇಟಾನಗರ: ಅರುಣಾಚಲ ಪ್ರದೇಶದ ತವಾಂಗ್​ನಲ್ಲಿ ಬುಧವಾರ ಬೆಳಗ್ಗೆ ಭಾರತೀಯ ಸೇನಾ ಹೆಲಿಕಾಪ್ಟರ್​ ಪತನಗೊಂಡಿದ್ದು, ಓರ್ವ ಪೈಲಟ್​ ದುರ್ಮರಣಕ್ಕೀಡಾಗಿದ್ದಾರೆ.

ಭಾರತ ಸೇನೆಗೆ ಸೇರಿದ ಚೀತಾ ಹೆಲಿಕಾಪ್ಟರ್​ ಬೆಳಗ್ಗೆ 10 ಗಂಟೆ ಸುಮಾರಿಗೆ ಪತನಗೊಂಡಿದ್ದು, ಇಬ್ಬರು ಪೈಲಟ್​ಗಳ ಪೈಕಿ ಲೆಫ್ಟಿನೆಂಟ್ ಕರ್ನಲ್ ಸೌರಭ್ ಯಾದವ್ ಮೃತಪಟ್ಟಿದ್ದು, ಮತ್ತೊಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net