

ಶಿವಮೊಗ್ಗ: ಶಿವಮೊಗ್ಗ ಮೂಲದ ಯುವತಿ ಹೆಸರಲ್ಲಿ ನಕಲಿ ಇನ್‌ಸ್ಟಾಗ್ರಾಂ ಖಾತೆ ತೆರೆದು ಅಶ್ಲೀಲ ಫೋಟೋಗಳನ್ನು ಹಾಕಿ ಆಕೆಗೆ ಮಾನಸಿಕ ಮತ್ತು ಲೈಂಗಿಕ ಕಿರುಕುಳ ನೀಡುತ್ತಿದ್ದ ಟೆಕ್ಕಿಯನ್ನು ಪೊಲೀಸರು ಬಂಧಿಸಿದ್ದಾರೆ.
ಆಂಧ್ರಪ್ರದೇಶ ರೇಣುಗುಂಟದ ಬಷೀರ್(26) ಬಂಧಿತ. ಈತ ಹೈದ್ರಾಬಾದ್‌ನ ಕಂಪನಿಯೊಂದ ಸಾಫ್ಟ್‌ವೇರ್ ಇಂಜಿನಿಯರ್ ಆಗಿರುವ ಈತ ಶಿವಮೊಗ್ಗದ ಯುವತಿಗೆ ಕಿರುಕುಳ ನೀಡುತ್ತಿದ್ದ.
ಯುವತಿಗೆ ಕಿರುಕುಳ ನೀಡುತ್ತಿದ್ದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಈ ಮೊದಲೇ ಪೊಲೀಸರು ಬಷೀರ್ಗೆ ಎಚ್ಚರಿಕೆ ನೀಡಿದ್ದರು. ಆದರೂ ಆತ ಇದ್ಯಾವುದಕ್ಕೂ ಬಗ್ಗದೆ ಹಳೇ ಚಾಳಿ ಮುಂದುವರಿಸಿದ್ದ. ನೊಂದ ಯುವತಿ ಶಿವಮೊಗ್ಗ ಸೈಬರ್ ಕ್ರೈಂ ಠಾಣೆಗೆ ದೂರು ನೀಡಿದ್ದಳು.
ಪೊಲೀಸ್ ಇನ್ಸ್ಪೆಕ್ಟರ್ ಗುರುರಾಜ್ ನೇತೃತ್ವದ ತಂಡ ಬಷೀರ್‌ನನ್ನು ಬುಧವಾರ ಬಂಧಿಸಿದ್ದಾರೆ. ಆರೋಪದ ಮೇಲೆ ಸಾಫ್ಟ್‌ವೇರ್ ಇಂಜಿನಿಯರ್‌ನನ್ನು ಶಿವಮೊಗ್ಗ ಸೈಬರ್ ಠಾಣೆ ಪೊಲೀಸರು ಬುಧವಾರ ಬಂಧಿಸಿದ್ದಾರೆ. ಆರೋಪಿಯಿಂದ ಎರಡು ಮೊಬೈಲ್ ಜಪ್ತಿ ಮಾಡಿದ್ದಾರೆ.