ಬೆಳ್ಳಂಬೆಳಗ್ಗೆ ಚಾಮುಂಡಿ ಸನ್ನಿಧಿಗೆ ಆಗಮಿಸಿದ ಜೆಡಿಎಸ್​ ಪಡೆ

jds hdk mysuru
Published on

ಮೈಸೂರು: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಶತಾಯಗತಾಯ 123 ಸ್ಥಾನಳನ್ನ ಗೆಲ್ಲಲೇ ಬೇಕೆಂದು ಪಣತೊಟ್ಟಿರುವ ಜೆಡಿಎಸ್​ ಪಡೆ ಇಂದು(ಗುರುವಾರ) ಬೆಳಗ್ಗೆ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಅಧಿದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದರು.

ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ಜೆಡಿಎಸ್​ ಪಕ್ಷದ ಎಲ್ಲ ಶಾಸಕರು, ಮುಂದಿನ ಚುನಾವಣೆಯ ಅಭ್ಯರ್ಥಿಗಳ ಜತೆಯಲ್ಲಿ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದರು. ಅನಿತಾ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ ಜತೆಯಲ್ಲಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net