ಖುಷಿ ನೀಡಿದ ಪಂಚಪೀಠಾಧೀಶರ ಸಮ್ಮೇಳನ

kse
ಕೆ.ಎಸ್.ಈಶ್ವರಪ್ಪ, ಮಾಜಿ ಡಿಸಿಎಂ
Published on

ಶಿವಮೊಗ್ಗ: ಜಗದ್ಗುರು ಪಂಚಾಚಾರ್ಯ ಪೀಠಗಳ ಸ್ವಾಮೀಜಿಗಳು ಒಗ್ಗಟ್ಟಗಾಗಿ ದಾವಣಗೆರೆಯಲ್ಲಿ ವೀರಶೈವ ಪೀಠಾಚಾರ್ಯರ ಹಾಗೂ ಶಿವಾಚಾರ್ಯರ ಶೃಂಗ ಸಮ್ಮೇಳನ ನಡೆಸುತ್ತಿರುವುದು ಸಂತೋಷದ ವಿಚಾರ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಹೇಳಿದರು.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 16 ವರ್ಷಗಳ ಬಳಿಕ ಐವರು ಮಠಾಧೀಶರು ಒಂದೇ ವೇದಿಕೆಯಲ್ಲಿ ಕಾಣಿಸಿಕೊಳ್ಳುತ್ತಿರುವುದು ಉತ್ತಮ ಬೆಳವಣಿಗೆ. ಹಿಂದೆ ನಾನು ಬೇರೆ ಬೇರೆ ಸಂದರ್ಭಗಳಲ್ಲಿ ಪಂಚಪೀಠಗಳ ಶ್ರೀಗಳನ್ನು ಭೇಟಿಯಾದಾಗ ಎಲ್ಲರೂ ಒಟ್ಟಿಗೆ ಭಕ್ತರಿಗೆ ದರ್ಶನ ನೀಡಿ ಮಾರ್ಗದರ್ಶನ ಮಾಡಬೇಕೆಂದು ಕೋರಿದ್ದೆ. ಎಲ್ಲದಕ್ಕೂ ಕಾಲ ಕೂಡಿ ಬರಲಿದೆ ಎಂದಿದ್ದರು. ಇದೀಗ ಕಾರ್ಯಕ್ರಮ ನಡೆಯುತ್ತಿರುವುದು ಸಂತಸದ ವಿಚಾರ ಎಂದು ತಿಳಿಸಿದರು.

ಪ್ರಧಾನಿ ನರೇಂದ್ರ ಮೋದಿ ಕುರಿತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಡಿರುವ ಮಾತಿಗೆ ಕೆ.ಎಸ್.ಈಶ್ವರಪ್ಪ ಆಕ್ಷೇಪ ವ್ಯಕ್ತಪಡಿಸಿ, ಮೋದಿ ಬೊಗಳುತ್ತಾರೆಂದು ಹೇಳಿರುವುದು ಖರ್ಗೆ ಅವರಿಗೆ ಶೋಭೆ ತರುವುದಿಲ್ಲ. ಅವರು ಮೋದಿ ಬಳಿ ಕ್ಷಮೆ ಕೇಳಬೇಕು. ತಮ್ಮ ಹೇಳಿಕೆ ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net