ಆಳಂದದಲ್ಲಿ ಉದ್ವಿಗ್ನ ಸ್ಥಿತಿ: ಶಿವಪೂಜೆ ಮಾಡಲು ಬಂದ ಹಿಂದೂ ಕಾರ್ಯಕರ್ತರಿಗೆ ಅರ್ಧದಲ್ಲೇ ತಡೆ

alanda
Published on

ಕಲಬುರಗಿ: ಆಳಂದ ಪಟ್ಟಣದಲ್ಲಿ ಶಿವಲಿಂಗ ಪೂಜೆ ಸಂಬಂಧ ಎರಡು ಕೋಮುಗಳ ನಡುವೆ ವಿವಾದ ಉಂಟಾಗಿದ್ದು, ಬಿಗುವಿನ ವಾತಾವರಣ ಸೃಷ್ಟಿಯಾಗಿದೆ.

ಆಳಂದದ ಲಾಡ್ಲೆ ಮಶಾಕ್ ದರ್ಗಾ ಪರಿಸದಲ್ಲಿ ಈಶ್ವರಲಿಂಗ ಇದೆ. ಇತ್ತೀಚಿಗೆ ಈ ಲಿಂಗಕ್ಕೆ ಕಿಡಿಗೇಡಿಗಳು ಅವಮಾನಿಸಿದ್ದರು. ಹೀಗಾಗಿ ಶಿವರಾತ್ರಿ ನಿಮಿತ್ತ ಈಶ್ವರಲಿಂಗ ಶುದ್ಧೀಕರಣ ಅಭಿಯಾನವನ್ನು ಶ್ರೀರಾಮ ಸೇನೆ ಹಮ್ಮಿಕೊಂಡೆಇದೆ. ಇದಕ್ಕೆ ಬಿಜೆಪಿ ಮತ್ತು ಹಿಂದುಪರ ಸಂಘಟನೆಗಳಿಂದ ಬೆಂಬಲ ವ್ಯಕ್ತವಾಗಿದೆ. ಮುಂಜಾಗ್ರತಾ ಕ್ರಮವಾಗಿ ಆಳಂದನಲ್ಲಿ ಜಲ್ಲಾಡಳಿತ ನಿಷೇಧಾಜ್ಞೆ ಜಾರಿಗೊಳಿಸಿದೆ. ಆದರೂ ಶಿವಲಿಂಗ ಪೂಜೆಗಾಗಿ ಆಳಂದಕ್ಕೆ ಹಿಂದುಪರ ಕಾರ್ಯಕರ್ತರು ಹೊರಟಿದ್ದಾರೆ. ಇದಕ್ಕೆ ಸ್ಥಳೀಯ ಮುಸ್ಲಿಂ ಸಂಘಟನೆ ಹಾಗೂ ಸಮಾಜದಿಂದ ವಿರೋಧ ವ್ಯಕ್ತವಾಗಿದೆ.

ಪೂಜೆ ಮಾಡಲು ಹೊರಟ ಕೇಂದ್ರ ಸಚಿವ ಭಗವಂತ ಖೂಬಾ, ಶಾಸಕರಾದ ಸುಭಾಷ್ ಗುತ್ತೇದಾರ ರಾಜಕುಮಾರ್ ಪಾಟೀಲ್ ತೆಲ್ಕೂರ ಇತರರನ್ನು ಪೊಲೀಸರು ತಡೆದಿದ್ದಾರೆ. ದರ್ಗಾದೊಳಗೆ ಇವರನ್ನು ಬರಲ್ಲ ಬಿಡುವುದಿಲ್ಲ ಎಂದು ಮುಸ್ಲಿಂ ಸಮಾಜದವರು ಅತ್ತ ಪ್ರತಿಭಟನೆ ನಡೆಸಿದ್ದಾರೆ. ಎರಡೂ ಕಡೆ ಗುಂಪು ಸೇರಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಎಸ್ಪಿ ಇಶಾ ಪಂತ್ ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ. ಎಲ್ಲೆಡೆ ಪೊಲೀಸ್​ ಬಂದೋಬಸ್ತ್​ ಮಾಡಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net