

ಕಲಬುರಗಿ: ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ(ಕೆಕೆಆರ್ಡಿಬಿ)ಯ ನೂತನ ಕಾರ್ಯದರ್ಶಿಯಾಗಿ ಆರ್. ವೆಂಕಟೇಶ್ಕುಮಾರ್ ಮಂಗಳವಾರ ಕಲಬುರಗಿಯ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು.
ಮಂಡಳಿಯು ಅಸ್ತಿತ್ವಕ್ಕೆ ಬಂದ 7 ವರ್ಷಗಳ ಬಳಿಕ ಪೂರ್ಣಪ್ರಮಾಣದ ಕಾರ್ಯದರ್ಶಿಯನ್ನು ರಾಜ್ಯ ಸರ್ಕಾರ ನೇಮಕ ಮಾಡಿದಂತಾಗಿದೆ. ಇದುವರೆಗೂ ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರೇ ಮಂಡಳಿಯ ಕಾರ್ಯದರ್ಶಿ ಹುದ್ದೆಯನ್ನು ನಿರ್ವಹಿಸುತ್ತಿದ್ದರು. ಸೆ.17ರಂದು ಕಲಬುರಗಿಯಲ್ಲಿ ನಡೆದ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೆಕೆಆರ್ಡಿಬಿಗೆ ಶಾಶ್ವತ ಕಾರ್ಯದರ್ಶಿ ನೇಮಿಸುವ ಭರವಸೆ ನೀಡಿದ್ದರು.