ಮಾಜಿ ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಚೇತರಿಕೆ, ಆಸ್ಪತ್ರೆಯಿಂದ ಡಿಸ್ಚಾರ್ಜ್​

siddaramaiah
Published on

ಬೆಂಗಳೂರು: ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸಂಪೂರ್ಣ ಗುಣಮುಖರಾಗಿದ್ದಾರೆ.

2020ರ ಆಗಸ್ಟ್‌ನಲ್ಲಿ ಕರೊನಾ ಸೋಂಕಿನಿಂದ ಗುಣಮುಖರಾಗಿದ್ದ ಸಿದ್ದರಾಮಯ್ಯಗೆ ಪುನಃ ಅಂದರೆ ಕಳೆದ ಮೇ 31ರ ರಾತ್ರಿ ಜ್ವರ ಕಾಣಿಸಿಕೊಂಡಿತ್ತು. ಕೋವಿಡ್‌ ಪರೀಕ್ಷೆಯಲ್ಲಿ ವರದಿ ನೆಗೆಟಿವ್‌ ಎಂದು ಬಂದಿತ್ತು. ಆದರೂ ಜ್ವರ ನಿಲ್ಲದ ಕಾರಣ ಜೂ.1ರಂದು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಇದೀಗ ಗುಣಮುಖರಾಗಿದ್ದು, ಇಂದು(ಸೋಮವಾರ) ಬೆಳಗ್ಗೆ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಆಸ್ಪತ್ರೆಯಿಂದ ಹೊರಟ ಸಿದ್ದರಾಮಯ್ಯ ಅವರನ್ನು ವೈದ್ಯರು ಹಾಗೂ ಸಿಬ್ಬಂದಿ ಬೀಳ್ಕೊಟ್ಟರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net