ರಾಜ್ಯದ ಪ್ರಮುಖ ಪ್ರವಾಸಿ ತಾಣಗಳಿಗೆ ಬೀಗ! ಇನ್ನೂ ಒಂದು ತಿಂಗಳು ಪ್ರವಾಸಿಗರಿಗಿಲ್ಲ ಪ್ರವೇಶ

kovid
Published on

ಬೆಂಗಳೂರು: ಕರೊನಾ ಸೋಂಕಿನ ಅಟ್ಟಹಾಸ ದಿನೇದಿನೆ ಹೆಚ್ಚಾಗುತ್ತಿರುವ ಪರಿಣಾಮ ಮತ್ತೆ ಐತಿಹಾಸಿಕ ಸ್ಮಾರಕಗಳ ವೀಕ್ಷಣೆಯನ್ನ ಬಂದ್ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

ಏಪ್ರಿಲ್ 16ರಿಂದ ಮೇ 15ರ ವರೆಗೆ ಬಾಗಲಕೋಟೆ ಜಿಲ್ಲೆಯ ವಿಶ್ವಪ್ರಸಿದ್ಧ ಸ್ಮಾರಕ ತಾಣಗಳಾದ ಬಾದಾಮಿ, ಐಹೊಳೆ, ಪಟ್ಟದಕಲ್ಲಿಗೆ ಸಾರ್ವಜನಿಕ ಪ್ರವೇಶ ಬಂದ್ ಮಾಡಲಾಗಿದೆ. ದಕ್ಷಿಣ‌ಕಾಶಿ ಎಂದೇ ಪ್ರಸಿದ್ಧಿ ಪಡೆದಿರುವ ಚಿಕ್ಕಬಳ್ಳಾಪುರ ಜಿಲ್ಲೆ ನಂದಿ ಗ್ರಾಮದ ಶ್ರೀ ಭೋಗನಂದೀಶ್ವರ ದೇವಾಲಯವನ್ನೂ ಬಂದ್ ಮಾಡಲಾಗಿದೆ. ಮೇ 15ರವರೆಗೆ ಸಾರ್ವಜನಿಕರಿಗೆ ನಿರ್ಬಂಧ ವಿಧಿಸಿ ಪುರಾತತ್ವ ಇಲಾಖೆ ಆದೇಶ ಹೊರಡಿಸಿದೆ. ಇದನ್ನೂ ಓದಿರಿ ತುರ್ತು ಸಭೆ ಕರೆದ ಸಿಎಂ: ಕರೊನಾ ತಡೆಗೆ ಕಠಿಣ ನಿಯಮ ಸಾಧ್ಯತೆ

ವಿಜಯಪುರ ಜಿಲ್ಲೆಯಲ್ಲೂ ವಿಶ್ವವಿಖ್ಯಾತ ಐತಿಹಾಸಿಕ ಗೋಳಗುಮ್ಮಟ, ಇಬ್ರಾಹಿಂ ರೋಜಾ ಸೇರಿದಂತೆ ಇತರ ಪ್ರವಾಸಿ ತಾಣಗಳನ್ನು ಬಂದ್​ ಮಾಡಲಾಗಿದೆ. ಗೋಳಗುಮ್ಮಟ ಪ್ರವೇಶದ್ವಾರಕ್ಕೆ ಬೀಗ ಹಾಕಲಾಗಿದೆ. ಹೀಗೆ ರಾಜ್ಯದ ಪ್ರವಾಸಿ ತಾಣಗಳಲ್ಲಿ ಸಾರ್ವಜನಿಕರ ಪ್ರವೇಶ ನಿಷೇಧಿಸಲಾಗುತ್ತಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net