ಕೆಪಿಟಿಸಿಎಲ್​ನಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ, ಶೀಘ್ರವೇ ನೇಮಕಾತಿ ಆದೇಶ ಪತ್ರ ವಿತರಣೆ

kptcl
Published on

ಬೆಂಗಳೂರು: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದಲ್ಲಿ (ಕೆಪಿಟಿಸಿಎಲ್) ಖಾಲಿ ಇರುವ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದು ಎಂದು ಇಂಧನ ಸಚಿವ ವಿ.ಸುನೀಲ್ ಕುಮಾರ್ ಹೇಳಿದ್ದಾರೆ.

ಕೆಪಿಟಿಸಿಎಲ್ ಸೋಮವಾರ ಕಾವೇರಿ ಭವನದಲ್ಲಿ ಏರ್ಪಡಿಸಿದ್ದ ನೇಮಕಾತಿ ಆದೇಶ ಪತ್ರ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. 2019ರ ಫೆಬ್ರವರಿಯಲ್ಲಿ 1,899 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿತ್ತು. ಆದರೆ, ನಾನಾ ಕಾರಣಗಳಿಂದ ನೆನೆಗುದಿಗೆ ಬಿದ್ದಿದ್ದ ನೇಮಕಾತಿ ಪ್ರಕ್ರಿಯೆ ಬಗ್ಗೆ ಕೆಲವರು ನನ್ನ ಗಮನಕ್ಕೆ ತಂದರು. ಕೂಡಲೇ ಎಲ್ಲ ಪ್ರಕ್ರಿಯೆಗಳನ್ನು ಮುಗಿಸಿ ಆದೇಶ ಪತ್ರ ನೀಡುವಂತೆ ಸಂಬಂಧಪಟ್ಟವರಿಗೆ ಸೂಚಿಸಿದ್ದೆ. ಅದರಂತೆ, ಮೊದಲ ಹಂತವಾಗಿ 21 ಮಂದಿಗೆ ಕಿರಿಯ ಪವರ್ ಮ್ಯಾನ್​ಗಳಿಗೆ ನೇಮಕಾತಿ ಆದೇಶ ಪತ್ರ ನೀಡಲಾಗಿದೆ. ಉಳಿದವರಿಗೆ ಶೀಘ್ರದಲ್ಲಿ ನೀಡಲಾಗುವುದು ಎಂದರು. ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಜಿ.ಕುಮಾರ ನಾಯಕ್, ಕೆಪಿಟಿಸಿಎಲ್ ಎಂಡಿ ಡಾ. ಎಂ. ಮಂಜುಳಾ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net