ಸಾಗರದಲ್ಲಿ ಬೆಳ್ಳಂಬೆಳಗ್ಗೆ ಕೆರೆಗೆ ಬಿದ್ದ ಕೆಎಸ್​ಆರ್​ಟಿಸಿ ಬಸ್​

ksrtv bus accident
Published on

ಶಿವಮೊಗ್ಗ: ಸಾಗರ ತಾಲೂಕಿನ ಉಳ್ಳೂರು ಕಾಸ್ಪಾಡಿ ಕ್ರಾಸ್​ನ ಬಳಿ ಇಂದು ಬೆಳ್ಳಂಬೆಳಗ್ಗೆ ಕೆರೆಗೆ ಕೆಎಸ್​ಆರ್​ಟಿಸಿ ಬಸ್​ ಪಲ್ಟಿಯಾಗಿದೆ.

ಶಿವಮೊಗ್ಗ- ಸಾಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗರದಿಂದ ಶಿವಮೊಗ್ಗ ಕಡೆಗೆ ಬಸ್ ಬರುತ್ತಿತ್ತು. ಈ ವೇಳೆ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಆಗುವುದನ್ನು ತಪ್ಪಿಸಲು ಹೋದ ಬಸ್​ ಚಾಲಕನ ನಿಯಂತ್ರಣ ತಪ್ಪಿ ರಸ್ತೆಬದಿಯ ಕೆರೆಗೆ ಪಲ್ಟಿಯಾಗಿದೆ.

ಬಸ್​ನಲ್ಲಿ ಚಾಲಕ, ನಿರ್ವಾಹಕ ಸೇರಿ 26 ಪ್ರಯಾಣಿಕರಿದ್ದರು. ದ್ವಿಚಕ್ರ ವಾಹನ ಸವಾರರಾದ ದೀಪಕ್ ಮತ್ತು ಪ್ರಜ್ವಲ್​ಗೆ ಗಂಭೀರ ಗಾಯಗೊಂಡಿದ್ದು, ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್​ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸಾಗರದ ಉಪವಿಭಾಗೀಯ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net