ಕುಂದಾಪುರದ ಚಿನ್ಮಯಿ ಆಸ್ಪತ್ರೆ ಮಾಲೀಕ ಕಟ್ಟೆ ಭೋಜಣ್ಣ ಶೆಟ್ಟಿ ಆತ್ಮಹತ್ಯೆ

katte bhojanna shetty
Published on

ಉಡುಪಿ: ಕುಂದಾಪುರದ ಚಿನ್ಮಯಿ ಆಸ್ಪತ್ರೆ ಮಾಲೀಕ ಕಟ್ಟೆ ಭೋಜಣ್ಣ ಶೆಟ್ಟಿ ಗುರುವಾರ ಆತ್ಮಹತ್ಯೆಗೆ ಶರಣಾಗಿದ್ದಾರೆ. ಇವರಿಗೆ 80 ವರ್ಷ ವಯಸ್ಸಾಗಿತ್ತು. ಕೋಟೇಶ್ವರ ಸಮೀಪದ ಪುರಾಣಿಕ ರಸ್ತೆಯ ಮೊಳಹಳ್ಳಿ ಗಣೇಶ್ ಶೆಟ್ಟಿ ಎಂಬುವರ ಮನೆಯ ಸಿಟೌಟ್​ನಲ್ಲೇ ರಿವಾಲ್ವಾರ್​ನಿಂದ ಗುಂಡು ಹಾರಿಸಿಕೊಂಡು ಮೃತಪಟ್ಟಿದ್ದಾರೆ.

ಕೋಟ್ಯಂತರ ಆಸ್ತಿಯ ಒಡೆಯ ಕಟ್ಟೆ ಭೋಜಣ್ಣ ಶೆಟ್ಟಿ ಅವರ ಮಾಲೀಕತ್ವದಲ್ಲಿ ಬೆಂಗಳೂರಿನಲ್ಲಿ ಹಲವು ಹೋಟೆಲ್​ಗಳಿವೆ. ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಕುಂದಾಪುರದ ಚಿನ್ಮಯಿ ಆಸ್ಪತ್ರೆ ಹೆಸರುವಾಸಿ. ಭೂಮಿ ಹಾಗೂ ಹಣಕಾಸಿನ ವ್ಯವಹಾರವೇ ಆತ್ಮಹತ್ಯೆಗೆ ಕಾರಣ ಎನ್ನುವ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಘಟನಾ ಸ್ಥಳಕ್ಕೆ ಕುಂದಾಪುರ ಪೊಲೀಸರು ಭೇಟಿ ನೀಡಿದ್ದರು ತನಿಖೆ ಆರಂಭಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net