ಮಣ್ಣು ಕುಸಿದು ಓರ್ವ ಕಾರ್ಮಿಕ ಸಾವು

labour death
ತನಿಕೋಡು ಚೆಕ್‌ಪೋಸ್ಟ್ ಬಳಿ ಜೆಸಿಬಿಯಿಂದ ಮಣ್ಣು ತೆಗೆಯುವ ವೇಳೆ ಮಣ್ಣು ಕುಸಿದು ಓರ್ವ ಸಾವನ್ನಪ್ಪಿರುವ ಘಟನೆ ನಡೆದ ಸ್ಥಳ.
Published on

ಶೃಂಗೇರಿ: ತಾಲೂಕಿನ ನೆಮ್ಮಾರ್ ಸಮೀಪದ ತನಿಕೋಡು ಚೆಕ್‌ಪೋಸ್ಟ್ ಬಳಿ ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಹಿನ್ನೆಲೆಯಲ್ಲಿ ಮಂಗಳವಾರ ಜೆಸಿಬಿಯಿಂದ ಮಣ್ಣು ತೆಗೆಯುವ ವೇಳೆ ನಾಲ್ವರು ಕಾರ್ಮಿಕರ ಮೇಲೆ ಮಣ್ಣು ಕುಸಿದು ಓರ್ವ ಸಾವನ್ನಪ್ಪಿದ್ದಾನೆ.
ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಮಾಡುವ ಸಂದರ್ಭ ಮಧ್ಯಾಹ್ನ ಸುಮಾರು 2 ಗಂಟೆಗೆ ಜೆಸಿಬಿ ಯಂತ್ರ ಬಳಸಿ ಮಣ್ಣು ತೆಗೆಯುವಾಗ ಕೆಳಗಡೆ ಕೆಲಸ ಮಾಡುತ್ತಿದ್ದ ನಾಲ್ವರು ಕಾರ್ಮಿಕರ ಮೇಲೆ ಏಕಾಏಕಿ ಮಣ್ಣು ಕುಸಿದಿದೆ. ತಕ್ಷಣ ಇಬ್ಬರು ಕಾರ್ಮಿಕರನ್ನು ರಕ್ಷಣೆ ಮಾಡಲಾಗಿದ್ದು ಸ್ವಲ್ಪ ಸಮಯದಲ್ಲಿ ಮತ್ತೊಬ್ಬನನ್ನು ರಕ್ಷಣೆ ಮಾಡಲಾಗಿದೆ. ಆದರೆ ಇನ್ನೊಬ್ಬ ಕಾರ್ಮಿಕನ ರಕ್ಷಣೆಗೆ ಒಂದು ಗಂಟೆ ಕಾಲ ಮೂರು ಜೆಸಿಬಿ ಮೂಲಕ ಕಾರ್ಯಾಚರಣೆ ಮಾಡಲಾಯಿತು. ಕಾರ್ಮಿಕನನ್ನು ಹೊರತೆಗೆದಾಗ ಆತ ಮೃತಪಟ್ಟಿದ್ದ. ರಾಷ್ಟ್ರೀಯ ಹೆದ್ದಾರಿಯ ಕಾರ್ಯಾಚರಣೆ ಹಲವು ತಿಂಗಳಿನಿಂದ ನಡೆಯುತ್ತಿದೆ. ಸ್ಥಳಕ್ಕೆ ಅಗ್ನಿಶಾಮಕ ದಳ, ಅಂಬುಲೆನ್ಸ್ ಹಾಗೂ ಶೃಂಗೇರಿ ಪೋಲಿಸರು ಭೇಟಿ ನೀಡಿ ಕಾರ್ಮಿಕರ ರಕ್ಷಣಾ ಕಾರ್ಯ ನಡೆಸಿದ್ದು ಉಳಿದ ಮೂರು ಕಾರ್ಮಿಕರನ್ನು ಸ್ಥಳೀಯ ಸರ್ಕಾರಿ ಅಸ್ಪತ್ರೆಗೆ ಸೇರಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net