

ಸೊರಬ: ದೇಶದ ಆರ್ಥಿಕ ವ್ಯವಸ್ಥೆಯನ್ನು ಪರಿವರ್ತಿಸಿದ ಚಾಣಾಕ್ಷ ಎಂಬ ಹೆಗ್ಗಳಿಕೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಸಲ್ಲುತ್ತದೆ ಎಂದು ಸಾಮಾಜಿಕ ಚಿಂತಕ ರಾಜಪ್ಪ ಮಾಸ್ತರ್ ತಿಳಿಸಿದರು.
ಪಟ್ಟಣದ ಬಂಗಾರ ಧಾಮದಲ್ಲಿ ತಾಲೂಕು ಕಾಂಗ್ರೆಸ್‌ನಿಂದ ಆಯೋಜಿಸಿದ್ದ ಶ್ರದ್ಧಾಂಜಲಿ ಸಭೆ ಹಾಗೂ ನುಡಿನಮನ ಕಾರ್ಯಕ್ರಮದಲ್ಲಿ ಮಾತನಾಡಿದರು.
ಜಗತ್ತಿನ ಪ್ರಮುಖ ಅರ್ಥಶಾಸ ಜ್ಞರಾಗಿ ಗುರುತಿಸಿಕೊಂಡಿದ್ದ ಅವರು ಅರ್ಥವ್ಯವಸ್ಥೆ ಕುಸಿಯುವ ಸಂದರ್ಭದಲ್ಲಿ ದೇಶದ ಮೇಲೆ ಪರಿಣಾಮವಾಗದಂತೆ ನೋಡಿಕೊಂಡಿದ್ದರು. ರಿಸರ್ವ್ ಬ್ಯಾಂಕ್ ಗವರ್ನರ್ ಆಗಿ ಕಾರ್ಯನಿರ್ವಹಿಸಿದ್ದ ಅವರು 90ರ ದಶಕದಲ್ಲಿ ಹಣಕಾಸು ಸಚಿವರಾಗಿ ಮಂಡಿಸಿದ ಬಜೆಟ್ ದೇಶದ ಇತಿಹಾಸದಲ್ಲಿ ಹೊಸ ಅಧ್ಯಾಯ ಬರೆಯಿತು ಎಂದು ತಿಳಿಸಿದರು.
ತಾಪಂ ಮಾಜಿ ಅಧ್ಯಕ್ಷ ಎಚ್. ಗಣಪತಿ ಮಾತನಾಡಿ, ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ವಿಪಕ್ಷದವರು ರಬ್ಬರ್ ಸ್ಟಾೃಂಪ್ ಎಂದು ಲೇವಡಿ ಮಾಡುತ್ತಿದ್ದರು. ಟೀಕೆಗಳಿಗೆ ಪ್ರತಿಕ್ರಿಯಿಸದೆ ಮಾಡುವ ಕೆಲಸ ಮಾತಾಗಬೇಕು ಎನ್ನುವ ನಿಟ್ಟಿನಲ್ಲಿ ಕೆಲಸ ಮಾಡಿದರು ಎಂದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಣ್ಣಪ್ಪ, ಬ್ಲಾಕ್ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಸುಜಾತಾ ಜೋತಾಡಿ, ಬಗರ್‌ಹುಕುಂ ಸಮಿತಿ ಅಧ್ಯಕ್ಷ ಎಂ.ಡಿ.ಶೇಖರ್, ಪುರಸಭೆ ಸದಸ್ಯರಾದ ಶ್ರೀರಂಜನಿ, ಪ್ರೇಮಾ, ಅನ್ಸರ್ ಅಹಮದ್, ಪ್ರಮುಖರಾದ ಪ್ರಕಾಶ್, ನೆಹರು, ಶ್ರೀಕಾಂತ್, ಸುರೇಶ್, ರಶೀದ್ ಸಾಬ್, ಸತ್ಯನಾರಾಯಣ, ಕುಮಾರ್, ಶಿವಪ್ಪ, ಜೈಶೀಲ, ವಿಶ್ವನಾಥ, ಶಶಿ ಇತರರಿದ್ದರು.