ಬಿಜೆಪಿ ಅವಧಿಯ ಮುಡಾ ಹಗರಣ ಚರ್ಚೆಗೆ ಆಗ್ರಹಿಸಿ ಪತ್ರ ಚಳವಳಿ

Shivaram protest
Published on

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ 2021ರಲ್ಲಿ ನಡೆದ ಭ್ರಷ್ಟಾಚಾರ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಬಹಿರಂಗ ಚರ್ಚೆಗೆ ಆಗಮಿಸಬೇಕು ಎಂದು ಒತ್ತಾಯಿಸಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ವತಿಯಿಂದ ನಗರ ಪಾಲಿಕೆ ಬಳಿ ಪತ್ರ ಚಳವಳಿ ನಡೆಯಿತು.

ಬಿಜೆಪಿ ಸರ್ಕಾರದ ಅವಧಿಯಲ್ಲಿ ಮುಡಾದಲ್ಲಿ ದೊಡ್ಡ ಮಟ್ಟದ ಹಗರಣ ನಡೆದಿದೆ. ಈ ಕುರಿತು ನಾವು ಧ್ವನಿ ಎತ್ತಿದರೂ ಸರ್ಕಾರ ತನಿಖೆ ನಡೆಸುವ ಆಸಕ್ತಿ ತೋರಲಿಲ್ಲ. ಆದರೆ, ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಕೆಳಗಿಳಿಸಬೇಕು ಎಂಬ ಏಕೈಕ ಉದ್ದೇಶದಿಂದ ಅವರ ವಿರುದ್ಧ ಭ್ರಷ್ಟಾಚಾರ ಆರೋಪ ಹೊರಿಸುತ್ತಿರುವುದು ಖಂಡನೀಯ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮುಡಾ ಹಗರಣದ ಕುರಿತು ಮುಕ್ತ ಚರ್ಚೆಗೆ ಆಗಮಿಸಲಿ ಅವರಿಗೆ ನಾವು ಉತ್ತರ ನೀಡುತ್ತೇವೆ ಎಂದು ಪ್ರತಿಭಟನೆಯ ನೇತೃತ್ವ ವಹಿಸಿದ್ದ ವೇದಿಕೆ ರಾಜ್ಯಾಧ್ಯಕ್ಷ ಕೆ.ಎಸ್. ಶಿವರಾಮು ಎಚ್ಚರಿಸಿದರು. ಈ ಸಂದರ್ಭ ಬಿ.ವೈ. ವಿಜಯೇಂದ್ರಗೆ ಅಂಚೆ ಕಾರ್ಡ್ ಕಳುಹಿಸುವ ಮೂಲಕ ಚರ್ಚೆಗೆ ಆಹ್ವಾನಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net