

ಚಾಮರಾಜನಗರ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಡೆಸುತ್ತಿರುವ ಭಾರತ್ ಜೋಡೋ ಯಾತ್ರೆ ಹಿನ್ನೆಲೆಯಲ್ಲಿ ರಾಜ್ಯದ ಗಮನ ಸೆಳೆದಿರುವ ಗುಂಡ್ಲುಪೇಟೆಯಲ್ಲಿ ಇಂದು (ಶುಕ್ರವಾರ) ಬೆಳಂಬೆಳಗ್ಗೆ ಲೋಕಾಯುಕ್ತ ದಾಳಿ ನಡೆದಿದೆ.
ಗುಂಡ್ಲುಪೇಟೆ ಪ್ರವಾಸಿ ಮಂದಿರ ವೃತ್ತದಲ್ಲಿರುವ ಆರ್ಟಿಒ ಚೆಕ್ ಪೋಸ್ಟ್ ಮೇಲೆ ಲೋಕಾಯುಕ್ತ ಲೋಕಾಯುಕ್ತ ಎಸ್ಪಿ ಸುರೇಶ್ ಬಾಬು ನೇತೃತ್ವದಲ್ಲಿ ದಾಳಿ ನಡೆದಿದೆ. ಆರ್ಟಿಒ ಅಧಿಕಾರಿ ಮಹೇಶ್ ಕರ್ತವ್ಯದಲ್ಲಿದ್ದ ವೇಳೆ ದಾಳಿ ಮಾಡಿರುವ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಹಣ ವಸೂಲಿ ಬಗ್ಗೆ ಸಾರ್ವಜನಿಕರಿಂದ ದೂರುಗಳು ಕೇಳಿಬಂದ ಹಿನ್ನೆಲೆ ಈ ದಾಳಿ ನಡೆದಿದೆ.
ಬೀದರ್ನ ಹುಮನಾಬಾದ್ನಲ್ಲಿರುವ ಆರ್ಟಿಒ ಚೆಕ್ಪೋಸ್ಟ್ ಮೇಲೂ ದಾಳಿ ಕಲಬುರಗಿ-ಬೀದರ್ ಲೋಕಾಯುಕ್ತ ಟೀಂ ದಾಳಿ ನಡೆಸಿದೆ. ವಾಹನ ಸವಾರರಿಂದ ಹಣ ವಸೂಲಿ ದೂರುಗಳು ಕೇಳಿಬಂದ ಹಿನ್ನೆಲೆ ಈ ದಾಳಿ ನಡೆದಿದೆ.