ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ: ಡಿವೈಡರ್​ ದಾಟಿ ಕಾರಿಗೆ ಡಿಕ್ಕಿ ಹೊಡೆದ ಲಾರಿ, ಸ್ಥಳದಲ್ಲೇ ಇಬ್ಬರ ಸಾವು

accident
Published on

ಶಿವಮೊಗ್ಗ: ನಗರದ ಹೊರವಲಯದ ಮಾಚೇನಹಳ್ಳಿ ಬಳಿ ಗುರುವಾರ ಬೆಳ್ಳಂಬೆಳಗ್ಗೆ ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಭದ್ರಾವತಿಯ ಪೇಪರ್ ಟೌನ್ ನಿವಾಸಿಗಳಾದ ಷಣ್ಮುಖ ಮತ್ತು ರಾಮಚಂದ್ರ ಮೃತರು. ಶಿವಮೊಗ್ಗದಿಂದ ಭದ್ರಾವತಿ ಕಡೆಗೆ ಲಾರಿ ತೆರಳುತ್ತಿತ್ತು. ಮಾಚೇನಹಳ್ಳಿ ಬಳಿ ಚಾಲಕನ ನಿಯಂತ್ರಣ ತಪ್ಪಿದ ಲಾರಿ, ಡಿವೈಡರ್ ದಾಟಿ ಬಂದು ಕಕಾರಿಗೆ ಡಿಕ್ಕಿಯಾಗಿದೆ. ಅಪಘಾತದಲ್ಲಿ ಕಾರು ಸಂಪೂರ್ಣ ಜಖಂಗೊಂಡಿದೆ.

ಕಾರಿನಲ್ಲಿ ಇಬ್ಬರೇ ಪ್ರಯಾಣಿಸುತ್ತಿದ್ದು, ಅಪಘಾತದ ತೀವ್ರತೆಗೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಲಾರಿಯ ಸ್ಟೇರಿಂಗ್ ಕಟ್ ಆಗಿ ಅಪಘಾತ ನಡೆದಿರುವ ಶಂಕೆ ವ್ಯಕ್ತವಾಗಿದೆ. ಭದ್ರಾವತಿ ಸಂಚಾರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net