ಆಸ್ಪತ್ರೆ ಮುಂಭಾಗ ಭೀಕರ ಅಪಘಾತ, ಸ್ಥಳದಲ್ಲೇ ಇಬ್ಬರ ಸಾವು

accident
Published on

ಚಿತ್ರದುರ್ಗ: ಚಿತ್ರದುರ್ಗ ಹೊರ ವಲಯದ ಬಸವೇಶ್ವರ ಆಸ್ಪತ್ರೆ ಮುಂಭಾಗ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಇಬ್ಬರು ಮೃತಪಟ್ಟ ಘಟನೆ ಇಂದು ಸಂಭವಿಸಿದೆ.

ಮೃತರನ್ನು ರಾಷ್ಟ್ರೀಯ ಹೆದ್ದಾರಿ ವಿಭಜಕ ಸ್ವಚ್ಛ ಮಾಡುವ ಕಾರ್ಮಿಕರು ಎಂದು ಗುರುತಿಸಲಾಗಿದೆ. ಇವರು ಮೃತರು ಚಿತ್ರದುರ್ಗ ತಾಲೂಕು ಹಾಯ್ಕಲ್ ಗೊಲ್ಲರಹಟ್ಟಿ ಗ್ರಾಮದವರು ಎನ್ನಲಾಗಿದೆ. ರಾಷ್ಟ್ರೀಯ ಹೆದ್ದಾರಿ ಕ್ಲೀನಿಂಗ್ ಕಾರ್ಯಕ್ಕೆಂದು ಟ್ರ್ಯಾಕ್ಟರ್​ನಲ್ಲಿ ಹೋಗುತ್ತಿದ್ದರು. ಮಾರ್ಗಮಧ್ಯೆ ಟ್ರ್ಯಾಕ್ಟರ್​ಗೆ ಬೆಂಗಳೂರಿನಿಂದ ಪೂನಾ ಕಡೆ ಹೊರಟಿದ್ದ ಲಾರಿ ಡಿಕ್ಕಿಯಾಗಿದ್ದು, ಡಿಕ್ಕಿ ಹೊಡೆದ ರಭಸಕ್ಕೆ ಟ್ರ್ಯಾಕ್ಟರ್​ ಇಂಜಿನ್​ ಜಖಂಗೊಂಡಿದೆ. ಟ್ರ್ಯಾಕ್ಟರ್​ನ ಟ್ರ್ಯಾಲಿ ಎರಡು ಪಲ್ಟಿಯಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net