ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದ ಅಪರಾಧಿಗೆ 10 ವರ್ಷ ಜೈಲು ಶಿಕ್ಷೆ

Court
Published on

ಶಿವಮೊಗ್ಗ: ನಗರದ ಮಹಿಳಾ‌ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ 2 ವರ್ಷದ ಹಿಂದೆ ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ್ದ ಅಪರಾಧಿಗೆ ಪೋಕ್ಸೋ ‌ನ್ಯಾಯಾಲಯದ ನ್ಯಾಯಾಧೀಶ‌ ದಯಾನಂದ್ ಅವರು 10 ವರ್ಷ ಜೈಲು ಶಿಕ್ಷೆ ವಿಧಿಸಿದ್ದಾರೆ.

ಮನ್ಸೂರ್ ಎಂಬಾತ 2019ರಲ್ಲಿ 16 ವರ್ಷದ ಅಪ್ರಾಪ್ತೆಯನ್ನ ಟಿವಿ ನೋಡುವ ನೆಪದಲ್ಲಿ ಮನಗೆ ಕರೆದು ಆಕೆ ಮೇಲೆ ಅತ್ಯಾಚಾರ ಎಸಗಿದ್ದ. ಈ ವಿಷಯವನ್ನ ಯಾರಿಗೂ ಹೇಳದಂತೆ ಬಾಲಕಿಗೆ ಜೀವ ಬೆದರಿಕೆ ಹಾಕಿದ್ದಲ್ಲದೆ ಬೀಡಿಯಿಂದ‌ ಆಕೆಯ ಬಲಗೈ ಸುಟ್ಟಿದ್ದ. ಈ ಕುರಿತು ಶಿವಮೊಗ್ಗದ ಮಹಿಳಾ‌ ಪೊಲೀಸ್ ಠಾಣೆಯಲ್ಲಿ ಪ್ರಕರಣ‌ ದಾಖಲಾಗಿತ್ತು.

ಪ್ರಕರಣ‌ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ ಪಿಐ ಅಭಯಪ್ರಕಾಶ್ ಸೋಮನಾಳ್‌ ಅವರು ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ‌ ನಡೆಸಿದ ನ್ಯಾಯಾಧೀಶ‌ ದಯಾನಂದ್ ಅವರು ಆರೋಪಿ ವಿರುದ್ಧದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 10 ವರ್ಷ ಜೈಲು ಶಿಕ್ಷೆ‌ ಹಾಗೂ 10 ಸಾವಿರ ರೂ. ದಂಡ ವಿಧಿಸಿ ತೀರ್ಪು ಪ್ರಕಟಿಸಿದ್ದಾರೆ. ಸರ್ಕಾರದ‌ ಪರವಾಗಿ ಸರ್ಕಾರಿ ಅಭಿಯೋಜಕ ಸತೀಶ್ ವಾದ ಮಂಡಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net