ಮಾಶಾಳದಲ್ಲಿ ಹಿರೇಮಠದ ಮೇಲೆ ಕಲ್ಲು ತೂರಾಟ, ಸ್ವಾಮೀಜಿ ಮೇಲೆ ಹಲ್ಲೆಗೆ ಯತ್ನ

kalburgi kedara shri
Published on

ಕಲಬುರಗಿ: ಅಫಜಲಪೂರ ತಾಲೂಕಿನ ಮಾಶಾಳ ಗ್ರಾಮದಲ್ಲಿರುವ ಸಿದ್ದಲಿಂಗೇಶ್ವರ ಸಂಸ್ಥಾನ ಹಿರೇಮಠದ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ.

ಗುರುವಾರ ರಾತ್ರಿ ಮಠದ ಕಿಟಕಿ ಮತ್ತಿತರ ಕಡೆ ಕಲ್ಲು ತೂರಿದ ಕಿಡಿಗೇಡಿಗಳು, ಮಠದ ಕೇದಾರ ಶ್ರೀಗಳ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ.

ಡಿ.28 ರಂದು ಕಲಬುರಗಿಯಲ್ಲಿ ಹಿಂದು ಜಾಗೃತಿ ಸೇನೆ ಸಂಘಟನೆಯಿಂದ ಆಯೋಜನೆ ಮಾಡಿದ್ದ ಕಾರ್ಯಕ್ರಮದಲ್ಲಿ ಲವ್ ಜಿಹಾದ್ ಮತ್ತು ಗೋ ಹತ್ಯೆ ನಿಷೇಧ ಕುರಿತು ಶ್ರೀ ಕೇದಾರ ಸ್ವಾಮೀಜಿ ಮಾತನಾಡಿದ್ದರು. ಈ ಹಿನ್ನೆಲೆಯಲ್ಲಿ ದುಷ್ಕರ್ಮಿಗಳು ಮಠದ ಮೇಲೆ ದಾಳಿ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಅಫಜಲಪೂರ ಪೊಲೀಸರರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net