ಶಿಶುಗಳಿಗೆ ತಾಯಿಯ ಎದೆಹಾಲೇ ಅಮೃತ, ಬೆಳವಣಿಗೆಗೆ ಪೂರಕ. ಆದರೆ, ಬಿಹಾರದ ಹಲವು ಜಿಲ್ಲೆಗಳಲ್ಲಿನ ಬಾಣಂತಿಯರ ಎದೆಹಾಲಿನಲ್ಲಿ ಯುರೇನಿಯಂ (ಯು238) ಪತ್ತೆಯಾಗಿದ್ದು, ಶಿಶುಗಳ ಆರೋಗ್ಯ ಕುರಿತು ಕಳವಳ ವ್ಯಕ್ತವಾಗಿದೆ. ವಿವಿಧ ಸಂಸ್ಥೆಗಳು ನಡೆಸಿದ ಈ ಸಂಶೋಧನೆಯಲ್ಲಿ, ಎದೆಹಾಲಿನಲ್ಲಿ ಯುರೇನಿಯಂ ಪತ್ತೆಯಾಗಿರುವುದು ಮಕ್ಕಳಲ್ಲಿ ಕ್ಯಾನ್ಸರ್ ಅಲ್ಲದ ಇತರ ಗಂಭೀರ ಸ್ವರೂಪದ ಆರೋಗ್ಯ ಸಮಸ್ಯೆಗೆ ಮೂಲವಾಗಬಹುದು ಎಂದು ಆತಂಕ ವ್ಯಕ್ತವಾಗಿದೆ. ಬಿಹಾರದ ಖಗಾರಿಯಾ ಜಿಲ್ಲೆಯಲ್ಲಿ ಹೆಚ್ಚು ತಾಯಂದಿರ ಎದೆಹಾಲಿನಲ್ಲಿ ಯುರೇನಿಯಂ ಅಂಶ ಪತ್ತೆಯಾಗಿದ್ದು, ಕತಿಹಾರ್ ಜಿಲ್ಲೆಯಲ್ಲಿ ಪತ್ತೆಯಾದ ಮಾದರಿಯಲ್ಲಿ ಯೂರೇನಿಯಂ ಪ್ರಮಾಣ ಅತ್ಯಧಿಕವಾಗಿದೆ.