ಡಿಸಿ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ಶೀಘ್ರಪರಿಹಾರ

ಡಿಸಿ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ಶೀಘ್ರಪರಿಹಾರ
Published on

ಹುಣಸೂರು: ಇಲ್ಲಿನ ನಗರಸಭೆ ಸಭಾಂಗಣದಲ್ಲಿ ಸೋಮವಾರ ಶಾಸಕರ ಅಧ್ಯಕ್ಷತೆಯಲ್ಲಿ ಆಯೋಜನೆಗೊಂಡಿದ್ದ ಸಭೆಯಲ್ಲಿ ಕನ್ನಡದ ನಂ.1 ವಿಜಯವಾಣಿ ದಿನ ಪತ್ರಿಕೆಯಲ್ಲಿ ಜೂ.17ರಂದು ಪ್ರಕಟಗೊಂಡ ಮದ್ಯವ್ಯಸನಕ್ಕೆ ಯುವಸಮೂಹ ಬಲಿ ವಿಶೇಷ ವರದಿ ಪ್ರತಿಧ್ವನಿಸಿತು.

ಕಟ್ಟೆಮಳಲವಾಡಿಯ ಬೆಳಕು ಸೇವಾ ಸಂಸ್ಥೆಯ ಮುಖ್ಯಸ್ಥ ನಿಂಗರಾಜ ಮಲ್ಲಾಡಿ ವಿಜಯವಾಣಿ ಪತ್ರಿಕೆಯನ್ನು ಶಾಸಕರ ಕೈಗೆ ನೀಡಿ ಗ್ರಾಮದಲ್ಲಿ ಯುವಸಮೂಹದ ಪರಿಸ್ಥಿತಿ ಅರಿತು ನ್ಯಾಯ ಒದಗಿಸುವಂತೆ ಮನವಿ ಮಾಡಿದರು.

ಗ್ರಾಮದಲ್ಲಿ ಬೆಳಗ್ಗೆ 6ಗಂಟೆಯಿಂದಲೇ ಮನೆಮನೆಯಲ್ಲಿ ಅಕ್ರಮ ಮದ್ಯಮಾರಾಟ ಮಾಡಲಾಗುತ್ತಿದೆ. ಬಡಕುಟುಂಬಗಳು ಬೀದಿಪಾಲಾಗುತ್ತಿವೆ. ತಾಲೂಕು ಆಡಳಿತ ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿಲ್ಲ. ಈ ಕುರಿತು ಗಮನಹರಿಸಬೇಕು ಎಂದು ಹೇಳಿದರು.

ಶಾಸಕ ಜಿ.ಡಿ.ಹರೀಶ್‌ಗೌಡ ಮಾತನಾಡಿ, ವರದಿ ಗಮನಕ್ಕೆ ಬಂದಿದ್ದು, ಶೀಘ್ರದಲ್ಲಿ ಗ್ರಾಮದಲ್ಲಿ ಜಿಲ್ಲಾಧಿಕಾರಿ ಸಮ್ಮುಖದಲ್ಲಿ ಅಬಕಾರಿ, ಪೊಲೀಸ್ ಇಲಾಖೆ ಒಳಗೊಂಡಂತೆ ಸಭೆ ನಡೆಸಿ ಪರಿಹಾರ ಕಂಡುಕೊಳ್ಳುವುದಾಗಿ ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net