ತಮಿಳುನಾಡಿನ ವಿರೋಧ ಹೊಸದೇನಲ್ಲ, ಮೇಕೆದಾಟು ಯೋಜನೆ ಜಾರಿ ಶತಃಸಿದ್ಧ: ಬೊಮ್ಮಾಯಿ

mekedatu
Published on

ಬೆಂಗಳೂರು: ಕಾವೇರಿ ವಿಚಾರದಲ್ಲಿ ಪದೇಪದೆ ಕ್ಯಾತೆ ತೆಗೆಯುತ್ತಿದ್ದ ತಮಿಳುನಾಡು, ಇದೀಗ ಯಾವುದೇ ಕಾರಣಕ್ಕೂ ಮೇಕೆದಾಟ ಯೋಜನೆಗೆ ಅನುಮತಿ ನೀಡುವುದಿಲ್ಲ. ಅಣೆಕಟ್ಟು ಕಟ್ಟಿದರೆ ತಮಿಳುನಾಡು ಕೃಷಿಕರಿಗೆ ಸಮಸ್ಯೆ ಆಗುತ್ತದೆ. ಈ ಯೋಜನೆಯನ್ನ ಕೈಬಿಡಬೇಕು ಎನ್ನುವ ಮೂಲಕ ಕ್ಯಾತೆ ತೆಗೆದಿದೆ. ಈ ಕುರಿತು ಪ್ರತಿಕ್ರಿಯಿಸಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ‌, ಬಹು ಉದ್ದೇಶಿತ ಮೇಕೆದಾಟು ಯೋಜನೆ ಜಾರಿಗೆ ಸರ್ಕಾರ ಶತಃಸಿದ್ಧ. ಈ ವಿಚಾರದಲ್ಲಿ ಕಾನೂನು ಹೋರಾಟ ಮುಂದುವರಿಸಲಿದೆ ಎಂದಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿದ ಬೊಮ್ಮಾಯಿ, ತಮಿಳುನಾಡಿನ ವಿರೋಧ ಹೊಸದೇನಲ್ಲ. ವ್ಯಕ್ತಪಡಿಸಿದ ಆಕ್ಷೇಪ ಅರ್ಥಹೀನ. ಈಗಾಗಲೇ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಿದ್ದು, ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದ ಬಳಿಕ ಕೇಂದ್ರ ಸರ್ಕಾರದಿಂದ ಅಗತ್ಯ ಅನುಮತಿ ಪಡೆಯಲಾಗುವುದು ಎಂದರು.

ಕರ್ನಾಟಕ-ಕೇರಳ ಗಡಿಯ ಅರಣ್ಯ ಪ್ರದೇಶದಲ್ಲಿ ಸ್ಯಾಟಲೈಟ್ ಫೋನ್ ಬಳಕೆಯ ಮೇಲೆ ಇಲಾಖೆ‌ ತೀವ್ರ‌ ನಿಗಾವಹಿಸಿದ್ದು, ಅಂತಹ ಚಟುವಟಿಕೆಗಳಿಗೆ ಸರ್ಕಾರ ಅವಕಾಶ ಕೊಡದು ಎಂದು ಬೊಮ್ಮಾಯಿ‌ ತಿಳಿಸಿದರು.

ಬೆಂಗಳೂರು ನಗರಕ್ಕೆ ಕುಡಿಯುವ ನೀರಿನ ಅಗತ್ಯಗಳನ್ನು ಪೂರೈಸುವ ಉದ್ದೇಶದಿಂದ ಮೇಕೆದಾಟು ಅಣೆಕಟ್ಟು ಯೋಜನೆಯನ್ನು ಆರಂಭಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net