ಮೇಕೆದಾಟು ಯೋಜನೆ ಅನುಷ್ಠಾನದಲ್ಲಿ ಯಾವುದೇ ರಾಜಿಯಿಲ್ಲ: ಸಿಎಂ ಬೊಮ್ಮಾಯಿ

mekedatu
Published on

ಬೆಂಗಳೂರು: ಮೇಕೆದಾಟು ಯೋಜನೆ ಅನುಷ್ಠಾನ ವಿಷಯದಲ್ಲಿ ಯಾವುದೇ ರಾಜಿಯಿಲ್ಲ. ಇದಕ್ಕಾಗಿ ಯಾರಾದರೂ ಹೋರಾಟ ಮಾಡುತ್ತಿದ್ದರೆ, ರಾಜಕೀಯ ಉದ್ದೇಶವೇ ಹೊರತು ಬೇರೇನಲ್ಲ. ಇಂತಹ ಹೋರಾಟ ಪರಿಗಣಿಸುವುದಿಲ್ಲ, ಸಂಬಂಧವೇ ಇಲ್ಲ, ಲೆಕ್ಕಕ್ಕೂ ಇಲ್ಲವೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಖಡಕ್ ಆಗಿ ಹೇಳಿದರು.

ತಮ್ಮ ನಿವಾಸದ ಬಳಿ ಗುರುವಾರ ಸುದ್ದಿಗಾರರ ಜತೆ ಮಾತನಾಡಿದ ಸಿಎಂ, ತಮಿಳುನಾಡಿನಲ್ಲಿ ರಾಜಕೀಯ ಕಾರಣಕ್ಕಾಗಿ ಈ ಯೋಜನೆಯನ್ನು ವಿರೋಧಿಸಲಾಗುತ್ತಿದೆ. ಕುಡಿಯುವ ನೀರು ಪೂರೈಕೆ ಹಾಗೂ ಸಂಕಷ್ಟ ಕಾಲದಲ್ಲಿ ಉಭಯ ರಾಜ್ಯಗಳಿಗೆ ನೀರು ಹಂಚಿಕೆಗಾಗಿ ಮೇಕೆದಾಟು ಬಳಿ ಅಣೆಕಟ್ಟೆ ನಿರ್ಮಿಸುವ ಯೋಜನೆ ಇದಾಗಿದೆ ಎಂದು ತಮಿಳುನಾಡಿನವರಿಗೆ ಗೊತ್ತಿದೆ ಎಂದರು.

ವಿಸ್ತೃತ ಯೋಜನಾ ವರದಿಗೆ ಒಪ್ಪಿಗೆ ನೀಡುವಂತೆ ಕೇಂದ್ರ ಜಲಶಕ್ತಿ ಸಚಿವರಿಗೆ ಒತ್ತಾಯಿಸಲಾಗಿದೆ. ಇತ್ತೀಚೆಗೆ ದೆಹಲಿಗೆ ತೆರಳಿದ ವೇಳೆ, ರಾಜ್ಯದ ಕೇಂದ್ರ ಸಚಿವರು, ಸಂಸದರ ಜತೆಗೂಡಿ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿಯಾಗಿ ಚರ್ಚಿಸಿದ್ದು, ಡಿಪಿಆರ್ ಗೆ ಅನುಮತಿ ಸಹಿತ ಸಂಬಂಧಿಸಿದ ಇಲಾಖೆಗಳ ತೀರುವಳಿ ನೀಡುವಂತೆ ವಿನಂತಿಸಿದ್ದು, ಯೋಜನೆ ಅನುಷ್ಠಾನಕ್ಕೆ ಸರ್ಕಾರ ಬದ್ಧವಾಗಿದೆ ಎಂದು ಬೊಮ್ಮಾಯಿ‌ ಪುನರುಚ್ಚರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net