ಕರೊನಾ ಉಲ್ಬಣಿಸಿದರೆ ಪರೀಕ್ಷೆಗೆ ಬ್ರೇಕ್ ಎನ್ನುತ್ತಲೇ ಶಾಲೆ-ಕಾಲೇಜು​ ಸ್ಥಗಿತದ ಸುಳಿವು ಕೊಟ್ಟ ಸಚಿವ ನಾಗೇಶ್

ಮತ್ತೆ ಶಾಲೆಗಳು ಮುಚ್ಚುತ್ತವಾ? ಈ ಬಗ್ಗೆ ಶಿಕ್ಷಣ ಸಚಿವರು ಹೇಳಿದ್ದೇನು..? #EducationMinister #BCNagesh #School - youtube
Published on

ಬೆಂಗಳೂರು: ಕರೊನಾ ಸೋಂಕು ಹೆಚ್ಚಾದರೆ ಪರೀಕ್ಷೆ ನಿಲ್ಲಿಸಲೂ ಸರ್ಕಾರ ಸಿದ್ಧವಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದರು.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕರೊನಾ ಮೂರನೇ ಅಲೆ ಫೆಬ್ರವರಿ ಅಂತ್ಯಕ್ಕೆ ಬರಬಹುದು ಎಂದು ತಜ್ಞರು ಹೇಳಿದ್ದಾರೆ. ಪರೀಕ್ಷೆ ಸಂದರ್ಭದಲ್ಲಿ ಸೋಂಕು ಹೆಚ್ಚಾದರೆ ಅಗತ್ಯ ಕ್ರಮ ಕೈಗೊಳ್ಳುತ್ತೇವೆ ಎಂದರು.

ಕೆಲ ಶಾಲಾ ಕಾಲೇಜುಗಳಲ್ಲಿ ಕೋವಿಡ್ ಸೋಂಕು ಹೆಚ್ಚಳ ಆತಂಕ ತಂದಿದೆ. ಸೋಂಕು ಕಂಡು ಬಂದಿರುವುದು ವಸತಿ, ನವೋದಯ ಶಾಲೆಗಳಲ್ಲಿ. 1ರಿಂದ 10 ಸರ್ಕಾರಿ ಸರ್ಕಾರಿ ಶಾಲೆಗಳಲ್ಲಿ ಸೋಂಕಿಲ್ಲ. ವಸತಿ, ನವೋದಯ ಶಾಲೆಗಳಲ್ಲಿ ಸೋಂಕು ಹಿನ್ನೆಲೆ ಅಗತ್ಯ ಕ್ರಮ ತೆಗೆದುಕೊಳ್ಳುತ್ತೇವೆ. ಇಲ್ಲೆಲ್ಲೂ ಮಕ್ಕಳಿಗೆ ತೊಂದರೆ ಆಗಿಲ್ಲ. ಸೂಕ್ತ ಚಿಕಿತ್ಸೆ ಕೊಡಲಾಗಿದೆ ಎಂದು ಸಚಿವರು ತಿಳಿಸಿದರು.

ಇಬ್ಬರು ಶಿಕ್ಷಕರಿಗೆ ಕರೊನಾ ಸೋಂಕು ಕಾಣಿಸಿಕೊಂಡಿದ್ದು, ಯಾವುದೇ ಸಮಸ್ಯೆ, ಆತಂಕ ಇಲ್ಲ. ನಾನು ನಾಳೆ ಮತ್ತು ನಾಡಿದ್ದು ಕರೊನಾ ಸೋಂಕಿತ ವಸತಿ, ನವೋದಯ ಶಾಲೆಗಳಿಗೆ ಭೇಟಿ ಕೊಡುತ್ತೇನೆ. ಮಾರ್ಗಸೂಚಿಗಳನ್ನು ಕಠಿಣವಾಗಿ ಪಾಲಿಸುತ್ತೇವೆ. ಮಕ್ಕಳ ಮೇಲೆ ಕೋವಿಡ್ ಯಾವುದೇ ಪರಿಣಾಮ ಬೀರುವುದಿಲ್ಲ ಎಂಬ ವರದಿಗಳು ಬಂದಿವೆ. ಹಾಗಾಗಿ ಗಾಬರಿ ಪಡುವ ಅಗತ್ಯ ಇಲ್ಲ. ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾದರೆ ಶಾಲೆಗಳನ್ನು ಬಂದ್​ ಮಾಡುವ, ಪರೀಕ್ಷೆ ನಿಲ್ಲಿಸುವ ಅಗತ್ಯ ಬಂದರೆ ಅದಕ್ಕೂ ಸರ್ಕಾರ ಸಿದ್ಧವಿದೆ ಎಂದರು. ಸದ್ಯ ಗಾಬರಿಯಾಗುವ ಸನ್ನಿವೇಶ ಇಲ್ಲ. ವಸತಿ ಶಾಲೆಗಳಲ್ಲಿ ಎಸ್.ಓ.ಪಿ. ಪಾಲನೆ ಆಗುತ್ತಿದೆಯೇ ಇಲ್ಲವೇ ಎಂಬುದನ್ನು ಪರಿಶೀಲಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ನಾಗೇಶ್ ತಿಳಿಸಿದರು. ವಸತಿ ಶಾಲೆಗಳಿಗೆ ಪ್ರತ್ಯೇಕ ಮಾರ್ಗಸೂಚಿ ಸಿದ್ಧಪಡಿಸುವ ಕುರಿತೂ ಚಿಂತನೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net