ನನಗೆ ಮೂವರು ಮಂತ್ರಿಗಳ ಮಧ್ಯೆ ಇಕ್ಕಳದಲ್ಲಿ ಸಿಕ್ಕಿಕೊಂಡಂತಾಗಿದೆ: ವಸತಿ ಸಚಿವ ಸೋಮಣ್ಣ

Somanna
Published on

ಬೆಂಗಳೂರು: ನಾನು ಮೂವರು ಮಂತ್ರಿಗಳು ಮತ್ತು ಜಿಲ್ಲಾಧಿಕಾರಿಗಳ ನಡುವೆ ಇಕ್ಕಳದಂತೆ ಸಿಕ್ಕಿಹಾಕಿಕೊಂಡಿದ್ದೇನೆ ಎಂದು ವಸತಿ ಸಚಿವ ವಿ. ಸೋಮಣ್ಣ ಹೇಳಿದರು.

ವಿಧಾನ ಪರಿಷತ್ ಕಲಾಪದಲ್ಲಿ ಬುಧವಾರ ಮಾತನಾಡಿದ ಸೋಮಣ್ಣ, ವಸತಿ ಇಲಾಖೆ ಕೆಲಸ ಮಾಡುವುದು ಸುಲಭವಲ್ಲ. ಬೇರೆ ಬೇರೆ ಇಲಾಖೆಗಳ ಅನುಮತಿ ಪಡೆಯಬೇಕು. ಒಂದು ಕಡೆ ಕಂದಾಯ ಮಂತ್ರಿ, ಆರ್​ಡಿಪಿಆರ್ ಮಂತ್ರಿ, ಅರ್ಬನ್ ಡೆವಲಪ್ಮೆಂಟ್ ಮಂತ್ರಿ ಹಾಗೂ ಮತ್ತೊಂದು ಕಡೆ ಜಿಲ್ಲಾಧಿಕಾರಿಗಳ ಮಧ್ಯೆ ಇಕ್ಕಳದಲ್ಲಿ ಸಿಕ್ಕಿಕೊಂಡಂತಾಗಿದೆ ಎನ್ನುತ್ತಾ ನಗೆ ಬೀರಿದರು.

ಬಾಗಲಕೋಟೆ ಜಿಲ್ಲೆಯಲ್ಲಿ ವಾಜಪೇಯಿ ವಸತಿ ಯೋಜನೆ ಅನುಷ್ಠಾನ ಸಂಬಂಧ ಹನುಮಂತ ನಿರಾಣಿ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸೋಮಣ್ಣ, ವಸತಿ ಇಲಾಖೆ ಕೆಲಸ ಮಾಡಬೇಕು ಅಂದ್ರೆ ಬೇರೆ ಬೇರೆ ಇಲಾಖೆಗಳ ಅನುಮತಿ ಪಡೆದುಕೊಳ್ಳಬೇಕು. ವಸತಿ ಇಲಾಖೆಯ ಸಮಸ್ಯೆಗಳನ್ನು ಶೀಘ್ರವೇ ಇತ್ಯರ್ಥ ಪಡಿಸಲು ಪಣತೊಟ್ಟಿದ್ದೇನೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net