ಮಂಡ್ಯದಲ್ಲಿ ಕೆರೆಗೆ ಹಾರಿ ತಾಯಿ-ಮಕ್ಕಳು ಆತ್ಮಹತ್ಯೆ!

lake
Published on

ನಾಗಮಂಗಲ: ತಾಯಿ ಮತ್ತು ಇಬ್ಬರು ಮಕ್ಕಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಧಾರುಣ ಘಟನೆ ತಾಲೂಕಿನ ಹುಳ್ಳೇನಹಳ್ಳಿ ಗ್ರಾಮದಲ್ಲಿ ಬುಧವಾರ ನಡೆದಿದೆ.

ಮಂಡ್ಯ ತಾಲೂಕು ಮಾಳೆ ಗ್ರಾಮದ ಗಿರೀಶ್ ಎಂಬುವರ ಪತ್ನಿ ಸಿಂಚನಾ(28) ಮತ್ತು ಇವರ ಮಕ್ಕಳಾದ ಮಹೇಂದ್ರ(6), ಡಿಂಪನಾ(3) ಮೃತ ದುರ್ದೈವಿಗಳು.

ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಸಿಂಚನಾ ತನ್ನ ಮಕ್ಕಳನ್ನು ಕರೆದುಕೊಂಡು ನಾಗಮಂಗಲದ ಹುಳ್ಳೇನಹಳ್ಳಿಯಲ್ಲಿರುವ ಅಜ್ಜಿ ಮನೆ ಬಂದಿದ್ದರು. ಬುಧವಾರ ಮಧ್ಯಾಹ್ನ ಗ್ರಾಮದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತದೇಹಗಳು ನೀರಿನಲ್ಲಿ ತೇಲುತ್ತಿರುವುದನ್ನು ಕಂಡು ಸ್ಥಳೀಯರು ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ನಾಗಮಂಗಲ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಮೃತದೇಹಗಳನ್ನು ನೀರಿನಿಂದ ಹೊರತೆಗೆದರು. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net