ಮುದ್ದೇನಹಳ್ಳಿಯಲ್ಲಿ 400 ಹಾಸಿಗೆ ಸೌಲಭ್ಯವುಳ್ಳ ಆಸ್ಪತ್ರೆ ನಿರ್ಮಾಣಕ್ಕೆ ಶಂಕುಸ್ಥಾಪನೆ ನೀಡಿದ ಅಮಿತ್ ಶಾ

amith sha
Published on

ಚಿಕ್ಕಬಳ್ಳಾಪುರ: ಮುದ್ದೇನಹಳ್ಳಿಯಲ್ಲಿ ಸತ್ಯಸಾಯಿ ಸಂಸ್ಥೆ ವತಿಯಿಂದ ನಿರ್ಮಿಸುತ್ತಿರುವ 400 ಹಾಸಿಗೆ ಸೌಲಭ್ಯವುಳ್ಳ ಉಚಿತ ಆಸ್ಪತ್ರೆ ಕಟ್ಟಡ ಕಾಮಗಾರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಶಂಕು ಸ್ಥಾಪನೆ ನೆರವೇರಿಸಿದರು.

ಮುದ್ದೇನಹಳ್ಳಿಯಲ್ಲಿ ಬಡಜನರ ಅನುಕೂಲಕ್ಕಾಗಿ ಶ್ರೀ ಸತ್ಯ ಸಾಯಿ ಸರಳಾ ಮೇಮೊರಿಯಲ್ ಆಸ್ಪತ್ರೆ ನಿರ್ಮಾಣ ಮಾಡಲಾಗುತ್ತಿದೆ. ಈ ಕಾಮಗಾರಿಗೆ ಶುಕ್ರವಾರ ಶಂಕುಸ್ಥಾಪನೆ ನೆರವೇರಿತು. ಕೇಂದ್ರ ಗೃಹ ಸಚಿವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವರಾದಿಯಾಗಿ ಮತ್ತಿತರರು ಸಾಥ್ ನೀಡಿದರು.

ಪ್ರೇಮಾಮೃತಂ ಸಭಾ ಭವನದಲ್ಲಿ ಆಯೋಜಿಸಿರುವ ವೇದಿಕೆ ಕಾರ್ಯಕ್ರಮದಲ್ಲಿ ಅಮಿತ್ ಶಾ ಪಾಲ್ಗೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net