

ಮಂಗಳೂರು: ಇತ್ತೀಚೆಗೆ ಬೆಳ್ತಂಗಡಿ ತಾಲೂಕಿನ ಮಾಜಿ ಶಾಸಕ ವಸಂತ ಬಂಗೇರ ಅವರ ಬಗೆಗಿನ ಪುಸ್ತಕ ಬಿಡುಗಡೆ ಕಾರ್ಯಕ್ರಮ ನಡೆದಿತ್ತು. ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ್ದರು. ಒಂದೆಡೆ ವೇದಿಕೆಯಲ್ಲಿ ರಾಜಕೀಯ ನಾಯಕರು ಸೇರಿಕೊಂಡು ಕಾರ್ಯಕ್ರಮ ಮಾಡುತ್ತಿದ್ದರೆ, ಇತ್ತ ಮುಸ್ಲಿಂ ಹುಡುಗ ಹಾಗೂ ಹಿಂದೂ ಹುಡುಗಿಯೊಬ್ಬಳು ಪರಸ್ಪರ ರೊಮ್ಯಾನ್ಸ್ ಮಾಡಿಕೊಂಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕಾಲೇಜೊಂದರಲ್ಲಿ ಈ ಘಟನೆ ನಡೆದಿದೆ.
ಕಾರ್ಯಕ್ರಮದಲ್ಲಿ ಕಾಂಗ್ರೆಸ್ನ ಹಿರಿಯ ನಾಯಕರು ಭಾಗಿಯಾಗಿದ್ದರು. ಇದೀಗ ವಿದ್ಯಾರ್ಥಿಗಳ ರೊಮ್ಯಾನ್ಸ್ ಘಟನೆ ರಾಜಕೀಯ ನಾಯಕರಿಂದ ಹಿಡಿದು ಎಲ್ಲರ ಮುಜುಗರಕ್ಕೆ ಕಾರಣವಾಗಿದೆ. ಮುಸ್ಲಿಂ ವಿದ್ಯಾರ್ಥಿ ಹಾಗೂ ಹಿಂದೂ ವಿದ್ಯಾರ್ಥಿನಿ ಪರಸ್ಪರ ಹಗ್ ಮಾಡಿ ಕಿಸ್ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ. ಲವ್ ಜಿಹಾದ್ ಎಂದು ಹಿಂದೂ ಪರ ಸಂಘಟನೆಗಳು ಟೀಕಿಸಿದ್ದು, ಇದೀಗ ಹಿಂದೂ ವಿದ್ಯಾರ್ಥಿನಿ ಹಾಗೂ ಮುಸ್ಲಿಂ ವಿದ್ಯಾರ್ಥಿಯನ್ನು ಕಾಲೇಜಿನಿಂದ ಸಸ್ಪೆಂಡ್ ಮಾಡಲಾಗಿದೆ.
ಹುಡುಗಿಯನ್ನು ಲವ್ ಜಿಹಾದ್ ಮಾಡುತ್ತೀಯಾ ಎಂದು, ಹಿಂದೂ ಪರ ಕಾರ್ಯಕರ್ತರು ಮುಸ್ಲಿಂ ವಿದ್ಯಾರ್ಥಿಗೆ ಬೆದರಿಕೆ ಹಾಕಿ, ವಾರ್ನಿಂಗ್ ನೀಡಿದ್ದಾರೆ. ಪ್ರಕರಣದ ಬಗ್ಗೆ ಕಾಲೇಜು ಆಡಳಿತ ಮಂಡಳಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದೆ.