ಮೈಸೂರಿನಲ್ಲಿ ಸಾಮೂಹಿಕ ಅತ್ಯಾಚಾರ ಪ್ರಕರಣ: ಶಂಕಿತ ಆರೋಪಿಗಳ ವಶ, ಗುಟ್ಟು ಬಿಟ್ಟುಕೊಡದ ಸಿಎಂ

bommai
Published on

ಬೆಂಗಳೂರು: ಮೈಸೂರಿನಲ್ಲಿ ಎಂಬಿಎ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ನಾಲ್ವರು ಆರೋಪಗಳನ್ನು ವಶಕ್ಕೆ ಪಡೆದಿರುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಯಾವುದೇ ಗುಟ್ಟು ಬಿಟ್ಟು ಕೊಡಲಿಲ್ಲ.

ಹಾವೇರಿ ಜಿಲ್ಲೆ ಪ್ರವಾಸಕ್ಕೆ ತೆರಳುವ ಮುನ್ನ ತಮ್ಮ ನಿವಾಸದ ಬಳಿ ಸುದ್ದಿಗಾರರ ಜತೆ ಮಾತನಾಡಿದ ಸಿಎಂ, ತಮಿಳುನಾಡಿನಲ್ಲಿ ನಾಲ್ವರು ಶಂಕಿತ ಆಪಾದಿತರನ್ನು ಪೊಲೀಸರು ವಶಕ್ಕೆ ಪಡೆದ ಕುರಿತು ಉತ್ತರಿಸಲಿಲ್ಲ. ಆದರೆ, ಮೈಸೂರು ಪ್ರಕರಣವನ್ನು ಆದಷ್ಟು ಬೇಗ ಬೇಧಿಸಲು ಮೂರು ದಿನಗಳ ಹಿಂದೆಯೇ ಸೂಚನೆ ನೀಡಿದ್ದು, ಐದು ತಂಡಗಳನ್ನು ರಚಿಸಿ ಕಾರ್ಯಾಚರಣೆಗೆ ಇಳಿದಿದ್ದಾರೆ ಎಂದು ಸಿಎಂ ತಿಳಿಸಿದರು.

ಈ ಹಿಂದೆ ಅನೇಕ ಜಟಿಲ ಪ್ರಕರಣಗಳನ್ನು ರಾಜ್ಯದ ಪೊಲೀಸರು ಬೇಧಿಸಿ, ಅಪರಾಧಿಗಳಿಗೆ ಶಿಕ್ಷೆಯಾಗುವಂತೆ ನೋಡಿಕೊಂಡಿದ್ದಾರೆ. ದಕ್ಷತೆಯಿಂದ ಕಾರ್ಯನಿರ್ವಹಣೆಯಲ್ಲಿ ನಮ್ಮ ಪೊಲೀಸರು ಮುಂದಿದ್ದು, ಈ ಪ್ರಕರಣದಲ್ಲೂ ಆದಷ್ಟು ತ್ವರಿತವಾಗಿ ಆರೋಪಿಗಳನ್ನು ಪತ್ತೆ ಹಚ್ವಲಿದ್ದಾರೆ ಎಂದು ಬೊಮ್ಮಾಯಿ‌ ವಿಶ್ವಾಸ ವ್ಯಕ್ತಪಡಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net