ನೇರಪ್ರಸಾರ: ಆಹಾ.. ಮೈಸೂರು ದಸರಾ ಎಷ್ಟೊಂದು ಸುಂದರಾ...

1178138
Published on

ದುಷ್ಟಶಕ್ತಿ ಮೇಲೆ ಶಿಷ್ಟಶಕ್ತಿಯ ವಿಜಯದ ಸಂಕೇತವಾಗಿ ಆಚರಿಸುವ ನಾಡಹಬ್ಬ ದಸರಾ ಮಹೋತ್ಸವದ ಸಂಭ್ರಮದ ದೃಶ್ಯವನ್ನ ಕಣ್ತುಂಬಿಕೊಳ್ಳಿ. ಚಾಮುಂಡಿಬೆಟ್ಟದಲ್ಲಿ ಅ.7ರಂದು ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರಿಂದ 411ನೇ ದಸರಾ ಉತ್ಸವಕ್ಕೆ ಚಾಲನೆ ಸಿಕ್ಕಿದ್ದು, ಇಂದು (ಅ.15) ಜಂಬೂಸವಾರಿ ಮೆರವಣಿಗೆಗೆ ಅರಮನೆ ಆವರಣ ಸಜ್ಜಾಗಿದೆ. ಸಂಜೆ 4.36ರಿಂದ 4.46ರವರೆಗೆ ಸಲ್ಲುವ ಶುಭ ಮೀನ ಲಗ್ನದಲ್ಲಿ ಅರಮನೆಯ ಬಲರಾಮ ದ್ವಾರದಲ್ಲಿ ನಂದಿಧ್ವಜ ಪೂಜೆ ನೆರವೇರಲಿದ್ದು, ಸಂಜೆ 5 ರಿಂದ 5.30ಕ್ಕೆ ಸಲ್ಲುವ ಶುಭ ಮೀನ ಲಗ್ನದಲ್ಲಿ ಅಂಬಾರಿ ಮೇಲೆ ವಿರಾಜಮಾನಳಾಗುವ ತಾಯಿ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪುಷ್ಪಾರ್ಚನೆ ನೆರವೇರಿಸಿದ ನಂತರ ವಿಜಯದಶಮಿ ಮೆರವಣಿಗೆಗೆ ಚಾಲನೆ ದೊರೆಯಲಿದೆ. ಮೈಸೂರು ದಸರಾ ಎಷ್ಟೊಂದು ಸುಂದರಾ... ಎಂಬುದನ್ನ ಕುಳಿತಲ್ಲೇ ಕಣ್ತುಂಬಿಕೊಳ್ಳಲು 'ಮೈಸೂರು ದಸರಾ 2021' ಶೀರ್ಷಿಕೆಯಡಿ ಸರ್ಕಾರವೇ ನೇರಪ್ರಸಾರ ಮಾಡುತ್ತಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net