LIVE| ಮೈಸೂರು ದಸರಾ ವೈಭವದ ನೇರಪ್ರಸಾರ ಇಲ್ಲಿದೆ

1362976
Published on

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಸಂಭ್ರಮದ ದೃಶ್ಯವನ್ನ ಕಣ್ತುಂಬಿಕೊಳ್ಳಿ. ದುಷ್ಟಶಕ್ತಿ ಮೇಲೆ ಶಿಷ್ಟಶಕ್ತಿಯ ವಿಜಯದ ಸಂಕೇತವಾಗಿ ಆಚರಿಸುವ ದಸರಾ ಮಹೋತ್ಸವದ ಜಂಬೂಸವಾರಿ ಮೆರವಣಿಗೆಗೆ ಅರಮನೆ ಆವರಣ ಸಜ್ಜಾಗಿದೆ. ಇಂದು(ಬುಧವಾರ) ಮಧ್ಯಾಹ್ನ 2.36ರಿಂದ 2.50ರವರೆಗೆ ಸಲ್ಲುವ ಶುಭ ಮಕರ ಲಗ್ನದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿ ಜಂಬೂ ಸವಾರಿ ಮೆರವಣಿಗೆಗೆ ಚಾಲನೆ ನೀಡಿದರು. ಸಂಜೆ 5 ರಿಂದ 5.30ಕ್ಕೆ ಸಲ್ಲುವ ಶುಭ ಮೀನ ಲಗ್ನದಲ್ಲಿ ಅಂಬಾರಿ ಮೇಲೆ ವಿರಾಜಮಾನಳಾಗುವ ತಾಯಿ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಮುಖ್ಯಮಂತ್ರಿಗಳು ಪುಷ್ಪಾರ್ಚನೆ ನೆರವೇರಿಸಿದ ನಂತರ ವಿಜಯದಶಮಿ ಮೆರವಣಿಗೆಗೆ ಚಾಲನೆ ಸಿಗಲಿದೆ. ಮೈಸೂರು ದಸರಾ ಎಷ್ಟೊಂದು ಸುಂದರಾ… ಎಂಬುದನ್ನ ಕುಳಿತಲ್ಲೇ ಕಣ್ತುಂಬಿಕೊಳ್ಳಲು ‘ಮೈಸೂರು ದಸರಾ ಜಂಬೂ ಸವಾರಿ 2022’ ಶೀರ್ಷಿಕೆಯಡಿ ಜಿಲ್ಲಾಡಳಿತವೇ 'ಮೈಸೂರು ವಾರ್ತೆ' ಯೂಟೂಬ್​ ಚಾನಲ್​ನಲ್ಲಿ ನೇರಪ್ರಸಾರ ಮಾಡುತ್ತಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net