

ಬೆಂಗಳೂರು: ರಾಜ್ಯ ಸರ್ಕಾರ ಈಗಾಗಲೇ ಹಲವಾರು ಸಹಾಯವಾಣಿಗಳನ್ನು ಹೊಂದಿದ್ದು, ಇದೀಗ ಮತ್ತೊಂದು ಸಹಾಯವಾಣಿಯನ್ನು ಆರಂಭಿಸಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ನೂತನ ಸಹಾಯವಾಣಿಯನ್ನು ಇಂದು ಲೋಕಾರ್ಪಣೆ ಮಾಡಿದರು.
ಸಿಎಂ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಕಲ್ಯಾಣ ಮಿತ್ರ ಏಕೀಕೃತ ಎಸ್ಸಿ-ಎಸ್ಟಿ 24x7 ಸಹಾಯವಾಣಿ (9482300400) ಲೋಕಾರ್ಪಣೆ ಮಾಡಿದರು.
ಈ ಸಂದರ್ಭದಲ್ಲಿ ಸಭಾಪತಿ ಬಸವರಾಜ ಹೊರಟ್ಟಿ, ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಎನ್. ರವಿಕುಮಾರ್, ಎ. ನಾರಾಯಣಸ್ವಾಮಿ, ಅ. ದೇವೇಗೌಡ, ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಚ್.ನಾಗೇಶ, ರಾಮಣ್ಣ ಲಮಾಣಿ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್, ಇಂಧನ ಇಲಾಖೆ ಎಸಿಎಸ್ ಜಿ. ಕುಮಾರ ನಾಯಕ, ಸಮಾಜ ಕಲ್ಯಾಣ ಇಲಾಖೆ ಆಯುಕ್ತ ಡಾ. ಕೆ. ರಾಕೇಶಕುಮಾರ, ನಿವೃತ್ತ ಐಎಎಸ್ ಅಧಿಕಾರಿ ಕೆ. ಶಿವರಾಮು ಮತ್ತಿತರರು ಉಪಸ್ಥಿತರಿದ್ದರು.