

ತಮಿಳುನಾಡು: ಕಾಲಿವುಡ್ನ ಸ್ಟಾರ್ ನಟ ಧನುಷ್ ಅವರ ಮುಂದಿನ ಬಹುನಿರೀಕ್ಷಿತ ಆ್ಯಕ್ಷನ್ ಜಾನರ್ 'ಕ್ಯಾಪ್ಟನ್ ಮಿಲ್ಲರ್' ಚಿತ್ರದ ಬಗ್ಗೆ ಸಾಕಷ್ಟು ಕುತೂಹಲ ವ್ಯಕ್ತವಾಗುತ್ತಿದ್ದು, ಅರುಣ್ ಮಾಥೇಶ್ವರನ್ ನಿರ್ದೇಶನದ ಈ ಚಿತ್ರವು 2024ರ ಸಂಕ್ರಾಂತಿಯಂದು ಅದ್ಧೂರಿ ಬಿಡುಗಡೆಗೊಳ್ಳಲು ಸಜ್ಜಾಗಿದೆ.
ಬಹುದಿನಗಳ ನಂತರ ತಮ್ಮ ನೆಚ್ಚಿನ ನಟನನ್ನು ತೆರೆಯ ಮೇಲೆ ನೋಡಲು ಕಾತರದಿಂದ ಕಾಯುತ್ತಿರುವ ಅಭಿಮಾನಿಗಳಿಗೆ ಇದೀಗ 'ಕ್ಯಾಪ್ಟನ್ ಮಿಲ್ಲರ್' ಚಿತ್ರತಂಡ ಹೊಸ ಅಪ್ಡೇಟ್ವೊಂದನ್ನು ನೀಡಿದೆ. ಸಿನಿಮಾದ ಎರಡನೇ ಸಿಂಗಲ್ ಉನ್ ಒಲಿಯಿಲೆ ನಾಳೆ ಸಂಜೆ 5 ಗಂಟೆಗೆ ಬಿಡುಗಡೆಯಾಗಲಿದೆ ಎಂದು ತಿಳಿಸಿದೆ.
ಸತ್ಯಜ್ಯೋತಿ ಫಿಲಂಸ್ ಬ್ಯಾನರ್ ಅಡಿಯಲ್ಲಿ ಸೆಂಧಿಲ್ ತ್ಯಾಗರಾಜ್ ಮತ್ತು ಅರ್ಜುನ್ ತ್ಯಾಗರಾಜನ್ ನಿರ್ಮಾಣದ ಈ ಚಿತ್ರದಲ್ಲಿ ಧನುಷ್ಗೆ ಜೋಡಿಯಾಗಿ ಪ್ರಿಯಾಂಕಾ ಮೋಹನ್ ಮುಖ್ಯಭೂಮಿಕೆಯಲ್ಲಿದ್ದು, ಶಿವರಾಜ್‌ಕುಮಾರ್, ಸಂದೀಪ್ ಕಿಶನ್, ಎಡ್ವರ್ಡ್ ಸೋನೆನ್‌ಬ್ಲಿಕ್ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಚಿತ್ರಕ್ಕೆ ಜಿ.ವಿ. ಪ್ರಕಾಶ್ ಕುಮಾರ್ ಸಂಗೀತವಿದೆ,(ಏಜೆನ್ಸೀಸ್).