

ತಮಿಳುನಾಡು: ಕಾಲಿವುಡ್ನ ಸ್ಟಾರ್ ನಟ, ದಳಪತಿ ವಿಜಯ್ ಮತ್ತು ನಿರ್ದೇಶಕ ವೆಂಕಟ್ ಪ್ರಭು ಕಾಂಬಿನೇಷನ್ನಲ್ಲಿ ಮೂಡಿಬರುತ್ತಿರುವ ಬಹುನಿರೀಕ್ಷಿತ 'ದಳಪತಿ 68' ಸಿನಿಮಾ ಸದ್ಯ ದಿನದಿಂದ ದಿನಕ್ಕೆ ಸಾಮಾಜಿಕ ಜಾಲತಾಣ ಸೇರಿದಂತೆ ಮಾಧ್ಯಮಗಳಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ಚಿತ್ರದ ಬಗ್ಗೆ ಪ್ರತಿಯೊಂದು ಅಪ್ಡೇಟ್ ತಿಳಿಯಲು ಬಹಳ ಕುತೂಹಲದಿಂದ ಕಾಯುತ್ತಿರುವ ವಿಜಯ್ ಫ್ಯಾನ್ಸ್ಗೆ ಇದೀಗ ಹೊಸ ಮಾಹಿತಿಯೊಂದು ಲಭಿಸಿದೆ.
ಇದನ್ನೂ ಓದಿ: ವಿಜಯೇಂದ್ರಗೆ ಆರತಿ ಬೆಳಗಿ ಮನೆಗೆ ಬರಮಾಡಿಕೊಂಡ ಮಹಿಳೆಯರು
ಎಜಿಎಸ್ ಎಂಟರ್‌ಟೈನ್‌ಮೆಂಟ್‌ನ ಪ್ರೊಡಕ್ಷನ್ ಬ್ಯಾನರ್ ಅಡಿಯಲ್ಲಿ ತಾತ್ಕಾಲಿಕವಾಗಿ 'ದಳಪತಿ 68' ಎಂಬ ಟೈಟಲ್ ಇಟ್ಟಿರುವ ಚಿತ್ರತಂಡ, ಅಧಿಕೃತ ಶೀರ್ಷಿಕೆಯನ್ನು ಯಾವಾಗ ಘೋಷಿಸಲಿದೆ? ಏನೆಂದು ಇಡಬಹುದು ಎಂಬ ಕುತೂಹಲ ಸಿನಿಪ್ರೇಕ್ಷಕರಲ್ಲಿ ಕಾಡುತ್ತಿದೆ. ಈ ಮಧ್ಯೆ ಹೊಚ್ಚ ಹೊಸ ಮಾಹಿತಿ ತಿಳಿಯಲು ನಿರೀಕ್ಷಿಸುತ್ತಿದ್ದ ಅಭಿಮಾನಿಗಳಿಗೆ ಚಿತ್ರತಂಡ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಕುರಿತಂತೆ ಇದೀಗ ಅಪ್ಡೇಟ್ ನೀಡಿದೆ.
ಇಂದು ಸಂಜೆ 6 ಗಂಟೆಗೆ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆಯಾಗಲಿದೆ ಎಂದು ನಿರ್ಮಾಪಕರು ಅಧಿಕೃತವಾಗಿ ಘೋಷಿಸಿದ್ದು, ಹೇಗಿರಲಿದೆ ವಿಜಯ್ ಅವರ ಲುಕ್? ಎಂಬುದನ್ನು ಕಾದು ನೋಡಬೇಕಿದೆ. ಚಿತ್ರದಲ್ಲಿ ವಿಜಯ್ಗೆ ನಾಯಕಿಯಾಗಿ ಮೀನಾಕ್ಷಿ ಚೌಧರಿ ಕಾಣಿಸಿಕೊಂಡಿದ್ದು, ಮೈಕ್ ಮೋಹನ್, ಜಯರಾಮ್, ಸ್ನೇಹಾ, ಲೈಲಾ, ಯೋಗಿಬಾಬು, ವಿಟಿವಿ ಗಣೇಶ್, ಅಜ್ಮಲ್ ಅಮೀರ್, ವೈಭವ್, ಪ್ರೇಮ್ಗಿ, ಅಜಯ್ ರಾಜ್ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ,(ಏಜೆನ್ಸೀಸ್).