

ಚಿಕ್ಕಬಳ್ಳಾಪುರ: ನಂದಿ ಗಿರಿಧಾಮನಲ್ಲಿ ಹೊಸ ವರ್ಷಾಚರಣೆ ಮಾಡಲು ನೀವೇನಾದ್ರೂ ಪ್ಲ್ಯಾನ್ ಮಾಡಿಕೊಂಡಿದ್ರೆ ಅದನ್ನ ಬಿಟ್ಟು ಬಿಡಿ. ಯಾಕಂದ್ರೆ ನಂದಿ ಬೆಟ್ಟಕ್ಕೆ ಎರಡ್ಮೂರು ದಿನ ಪ್ರಾವಸಿಗರಿಗಿಲ್ಲ ಎಂಟ್ರಿ.
ಹೊಸ ವರ್ಷದ ಸಂಭ್ರಮಾಚರಣೆ ನೆಪದಲ್ಲಿ ಅಹಿತಕರ ಘಟನೆಗಳು ಸಂಭವಿಸದಂತೆ ತಡೆಯುವ ಉದ್ದೇಶದಿಂದ ಡಿ.30ರ ಸಂಜೆ 6 ರಿಂದ ಜ.2ರ ಬೆಳಗ್ಗೆ 6ರವರೆಗೆ ನಂದಿ ಗಿರಿಧಾಮಕ್ಕೆ ಪ್ರವಾಸಿಗರ ಪ್ರವೇಶ ನಿಷೇಧಿಸಲಾಗಿದೆ.
ಹೊಸ ವರ್ಷಾಚರಣೆಗೆ ಬೆಂಗಳೂರು, ಬೆಂಗಳೂರು ಗ್ರಾಮಾಂತರ ಮತ್ತು ತುಮಕೂರು ಸೇರಿ ವಿವಿಧ ಭಾಗಗಳಿಂದ ಸಾವಿರಾರು ಪ್ರವಾಸಿಗರು ಬರುವ ಸಾಧ್ಯತೆ ಇದೆ. ಇದರಿಂದ ಕರೊನಾ ಸೋಂಕು ಹರಡುವ ಸಾಧ್ಯತೆ ಇದೆ. ಹಾಗಾಗಿ ಪ್ರವಾಸಿಗರಪ್ರವೇಶಕ್ಕೆ ಅವಕಾಶ ಇರುವುದಿಲ್ಲ ಎಂದು ಜಿಲ್ಲಾಧಿಕಾರಿ ಆರ್.ಲತಾ ತಿಳಿಸಿದ್ದಾರೆ.