

ರಾಮನಗರ: ಕರೊನಾ ಸಂಕಷ್ಟ ಕಾಲದಲ್ಲಿ ರಾಮನಗರ ಜನರ ಅನುಕೂಲಕ್ಕಾಗಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಎರಡು ಆಂಬುಲೆನ್ಸ್ ಅನ್ನು ಜಿಲ್ಲೆಗೆ ಕೊಡುಗೆ ನೀಡಿದ್ದಾರೆ.
ಜಿಲ್ಲಾ ವೈದ್ಯಾಧಿಕಾರಿಗಳ ಕಚೇರಿ ಆವರಣದಲ್ಲಿ ಇಂದು(ಮಂಗಳವಾರ) ಆಂಬುಲೆನ್ಸ್ಗಳನ್ನು ಆರೋಗ್ಯ ಇಲಾಖೆಗೆ ಹಸ್ತಾಂತರಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ಕೊವೀಡ್ ಎರಡನೇ ಅಲೆ ಹೆಚ್ಚಾಗಿದೆ, ಸಾವು-ನೋವಿನ ಪ್ರಮಾಣ ಹೆಚ್ಚಾಗಿದೆ. ಭಾನುವಾರ ಮಾಜಿ ಸಿಎಂ ಕುಮಾರಸ್ವಾಮಿ ಮತ್ತು ಶಾಸಕಿ ಅನಿತಾ ಕುಮಾರಸ್ವಾಮಿ ಅವರು ಅಧಿಕಾರಿಗಳ ಜತೆ ವಿಡಿಯೋ ಕಾನ್ಫರೆನ್ಸ್ ನಡೆಸಿದ್ದರು. ಈ ವೇಳೆ ಅಧಿಕಾರಿಗಳು ರಾಮನಗರ ತಾಲೂಕಿನಲ್ಲಿ ಆಂಬುಲೆನ್ಸ್ ಕೊರತೆ ಇರುವುದಾಗಿ ತಿಳಿಸಿದ್ದರು. ಹಾಗಾಗಿ ರಾಮನಗರಕ್ಕೆ ಎರಡು ಆಂಬುಲೆನ್ಸ್ ವ್ಯವಸ್ಥೆ ಮಾಡಿದ್ದೇವೆ. ಊಟದ ಸಮಸ್ಯೆ ಎದುರಾಗಿದೆ ಎಂಬುದು ನಮ್ಮ ಗಮನಕ್ಕೆ ಬಂದಿದೆ. ಅದಕ್ಕೂ ಸೂಕ್ತ ವ್ಯವಸ್ಥೆ ಮಾಡಲಾಗುತ್ತಿದೆ ಎಂದರು. ಇದನ್ನೂ ಓದಿರಿ ಸ್ವಾಭಿಮಾನಿ ಗೆಲುವಿಗೆ 2 ವರ್ಷ: ಸುಮಲತಾ ವಿರುದ್ಧ ಸಾರ್ವಜನಿಕರ ಆಕ್ರೋಶ..!