

ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಕರ್ನಾಟದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಗೆ ಅ.17ರಂದು ವಿರಾಮ ಇರಲಿದೆ. ಅಂದು ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯುವ ಹಿನ್ನೆಲೆಯಲ್ಲಿ ಆ ದಿನ ಯಾತ್ರೆ ನಡೆಯುವುದಿಲ್ಲ. ಮರುದಿನ ಯಾತ್ರೆ ಮುಂದುವರಿಯಲಿದೆ.
ಯಾತ್ರೆಯಲ್ಲಿ ಪಾಲ್ಗೊಂಡಿರುವ ರಾಹುಲ್ ಗಾಂಧಿ ಸೇರಿದಂತೆ ಪ್ರದೇಶ ಕಾಂಗ್ರೆಸ್ ಕಮಿಟಿಯ ಸುಮಾರು 40 ಪದಾಧಿಕಾರಿಗಳಿಗೆ ಮತ ಚಲಾಯಿಸಲು ಅನುಕೂಲವಾಗುವಂತೆ ಅವರಿರುವ ಕ್ಯಾಂಪ್ ಸ್ಥಳದಲ್ಲೇ ಪೋಲಿಂಗ್ ಬೂತ್ ಸ್ಥಾಪಿಸಲಾಗುತ್ತೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸಲು ಸೆ.22ರಂದು ಅಧಿಸೂಚನೆ ಹೊರಡಿಸಲಾಗಿತ್ತು. ಅ.18ರಂದು ಮತದಾನ ನಡೆಯಲಿದ್ದು, ಅ.19ರಂದು ಫಲಿತಾಂಶ ಪ್ರಕಟವಾಗಲಿದೆ.
2022ರ ಸೆಪ್ಟೆಂಬರ್ 7ರಂದು ಕನ್ಯಾಕುಮಾರಿಯಿಂದ ಶುರುವಾಗಿರುವ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ, ಸೆ.30ರಂದು ತಮಿಳುನಾಡಿನಿಂದ ಗುಂಡ್ಲುಪೇಟೆ ಮೂಲಕ ಕರ್ನಾಟಕವನ್ನು ಪ್ರವೇಶಿಸಿದೆ. ಚಾಮರಾಜನಗರ, ಮೈಸೂರು, ಮಂಡ್ಯ ಜಿಲ್ಲೆಯಲ್ಲಿ ಯಶಸ್ವಿಯಾಗಿ ಯಾತ್ರೆ ನಡೆಸಿರುವ ರಾಹುಲ್, ಇಂದು(ಅ.8) ತುಮಕೂರು ಜಿಲ್ಲೆ ಪ್ರವೇಶಿಸಿದ್ದಾರೆ. ಈ ಯಾತ್ರೆ ಕಾಶ್ಮೀರದಲ್ಲಿ ಕೊನೆಯಾಗಲಿದೆ.