ಈರುಳ್ಳಿ ತುಂಬಿದ್ದ ವಾಹನ-ಹಾಲಿನ ಕ್ಯಾಂಟರ್​ ನಡುವೆ ಭೀಕರ ಅಪಘಾತ: ಸ್ಥಳದಲ್ಲೇ ಇಬ್ಬರ ಸಾವು

New Project(22)
Published on

ಚಾಮರಾಜನಗರ: ಗುಂಡ್ಲುಪೇಟೆ ತಾಲೂಕಿನ ಕೂತನೂರು ಸಮೀಪ ಈರುಳ್ಳಿ ತುಂಬಿಕೊಂಡು ಹೋಗುತ್ತಿದ್ದ ವಾಹನ ಮತ್ತು ಹಾಲಿನ ಟ್ಯಾಂಕರ್ ನಡುವೆ ಶನಿವಾರ ರಾತ್ರಿ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದಾರೆ.

ಕೇರಳದ ಕಲ್ಪೆಟ್ಟ ಮೂಲದ ಅಲ್ತಾಫ್ ಮತ್ತು ಅಜ್ಮಲ್ ಮೃತ ದುರ್ದೈವಿಗಳು‌. ಗುಂಡ್ಲುಪೇಟೆಯಲ್ಲಿ ಈರುಳ್ಳಿ ಖರೀದಿಸಿ ಕೇರಳಗೆ ಕೊಂಡೊಯ್ಯುತ್ತಿದ್ದ ವೇಳೆ ಅತಿವೇಗವಾಗಿ ಬಂದ ಟ್ಯಾಂಕರ್ ಚಾಲಕನ ನಿಯಂತ್ರಣತಪ್ಪಿ ಡಿಕ್ಕಿ ಹೊಡೆದಿದೆ. ಸ್ಥಳಕ್ಕೆ ಗುಂಡ್ಲುಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net