

ಚಂಡಿಘಡ: ಪಂಜಾಬ್ ವಿಧಾನಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಸಿಎಂ ಚರಣಜಿತ್ ಸಿಂಗ್ ಚನ್ನಿ ಸ್ಪರ್ಧಿಸಿದ್ದ 2 ಕ್ಷೇತ್ರದಲ್ಲೂ ಆರಂಭಿಕ ಹಿನ್ನಡೆ ಕಂಡಿದ್ದಾರೆ.
ಆಮ್ ಆದ್ಮಿ ಪಕ್ಷ ಮುನ್ನಡೆ ಸಾಧಿಸಿದ್ದು, ಪಂಜಾಬ್ ಎಎಪಿ ಸಿಎಂ ಅಭ್ಯರ್ಥಿ ಭಗವಂತ್ ಮಾನ್ ಮನೆಯಲ್ಲಿ ಸಂಭ್ರಮಾಚರಣೆಗೆ ಸಿದ್ಧತೆ ಭರದಿಂದ ಸಾಗಿದೆ.
ಮಧ್ಯಾಹ್ನದ ವೇಳೆಗೆ ಚುನಾವಣೆಯ ಸ್ಪಷ್ಟ ಫಲಿತಾಂಶ ಸಿಗುವ ನಿರೀಕ್ಷೆ ಇದೆ. ಪಂಜಾಬ್ನ ಘಟಾನುಘಟಿಗಳಿಗೆ ಮತ ಎಣಿಕೆ ಆರಂಭದಲ್ಲೇ ಆಪ್ ಬಿಗ್ ಶಾಕ್ ಕೊಟ್ಟಿದೆ. ಮೂರನೇ ಸ್ಥಾನದಲ್ಲಿ ಬಿಜೆಪಿ ಇದೆ. ಚಮ್ಕೌರ್ ಸಾಹಿಬ್ ಕ್ಷೇತ್ರದಲ್ಲೂ ಪಂಜಾಬ್ ಸಿಎಂ ಚನ್ನಿಯ ಅದೃಷ್ಟ ಪರೀಕ್ಷೆ ಹಾವು ಏಣಿಯಂತಿದೆ. 2017ರ ವಿಧಾನಸಭೆ ಚುನಾವಣೆಯಲ್ಲಿ ಚನ್ನಿ ಈ ಕ್ಷೇತ್ರದಲ್ಲಿ ಗೆದ್ದಿದ್ದರು.