

ಅಮರಾವತಿ: ತಿರುಪತಿ ತಿಮ್ಮಪ್ಪ ದೇವಾಲಯದ ಲಡ್ಡು ಪ್ರಸಾದ ವಿವಾದ ಇದೀಗ ಹೈಕೋರ್ಟ್ ಮೆಟ್ಟಿಲೇರಿದೆ. ಲಡ್ಡು ಪ್ರಕರಣದಲ್ಲಿ ವೈಎಸ್‌ಪಿ ಅಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಮಾನಹಾನಿಯಾಗುತ್ತಿದೆ ಎಂದು ಆರೋಪಿಸಿ ಆಂಧ್ರದ ಮಾಜಿ ಹೆಚ್ಚುವರಿ ಅಡ್ವೊಕೇಟ್ ಜನರಲ್ ಪೊನ್ನವೋಲು ಸುಧಾಕರ್ ರೆಡ್ಡಿ ಹೈಕೋರ್ಟ್ ಮೊರೆ ಹೋಗಿದ್ದಾರೆ.
ಲಡ್ಡು ಪ್ರಸಾದ ತಯಾರಿಸಲು ಪ್ರಾಣಿಗಳ ಕೊಬ್ಬು ಮತ್ತು ಮೀನಿನ ಎಣ್ಣೆಯನ್ನು ಬಳಸಲಾಗಿದೆ ಎಂದು ಆರೋಪಿಸಿ ವೈ.ಎಸ್. ಜಗನ್ ವಿರುದ್ಧ ಅಪಪ್ರಚಾರ ಮಾಡುವುದನ್ನು ನಿಲ್ಲಿಸುವಂತೆ ಅವರು ಹೈಕೋರ್ಟ್‌ಗೆ ಮನವಿ ಮಾಡಿದರು.
ಈ ಕುರಿತು ಕೂಡಲೇ ಸಮಿತಿ ರಚಿಸಿ ತನಿಖೆ ನಡೆಸುವಂತೆ ಪೀಠವನ್ನು ಸುಧಾಕರ್ ರೆಡ್ಡಿ ಕೋರಿದರು. ಆದರೆ, ಹೈಕೋರ್ಟ್ ಪ್ರತಿಕ್ರಿಯಿಸಿ, ಈಗ ತುರ್ತು ವಿಚಾರಣೆ ನಡೆಸುವ ಅಗತ್ಯವಿಲ್ಲ, ಮುಂದಿನ ಬುಧವಾರ ವಿಚಾರಣೆ ನಡೆಸಲಾಗುವುದು ಎಂದು ಹೇಳಿದೆ.