ಮುಲಾಯಂ ಸಿಂಗ್​ ನಿಧನಕ್ಕೆ ಸಂತಾಪ ಸೂಚಿಸಿದ ಪ್ರಧಾನಿ: ತುರ್ತು ಪರಿಸ್ಥಿತಿ ವೇಳೆ ಪ್ರಜಾಪ್ರಭುತ್ವದ ಸೇನಾನಿಯಾಗಿದ್ದರು...

Mulayam Singh Yadav
Published on

ದೆಹಲಿ: ಸಮಾಜವಾದಿ ಪಕ್ಷದ ಸಂಸ್ಥಾಪಕ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಕಂಬನಿ ಮಿಡಿದಿದ್ದಾರೆ.

ಸರಣಿ ಟ್ವೀಟ್​ ಮಾಡಿರುವ ನರೇಂದ್ರ ಮೋದಿ, ಮುಲಾಯಂ ಜತೆಗಿರುವ ಫೋಟೋವನ್ನು ಶೇರ್​ ಮಾಡಿಕೊಂಡಿದ್ದಾರೆ. 'ಮುಲಾಯಂ ಸಿಂಗ್​ ಯಾದವ್​ ತುರ್ತು ಪರಿಸ್ಥಿತಿ ವೇಳೆ ಪ್ರಜಾಪ್ರಭುತ್ವದ ಸೇನಾನಿಯಾಗಿದ್ದರು' ಎಂದಿದ್ದಾರೆ.

'ಮುಲಾಯಂ ಸಿಂಗ್​ ಯಾದವ್ ಅವರದ್ದು ಅಸಾಧಾರಣ ವ್ಯಕ್ತಿತ್ವ. ಜನರ ಸಮಸ್ಯೆಗಳಿಗೆ ಸಂವೇದನಾಶೀಲರಾಗಿ ಸ್ಪಂದಿಸುತ್ತಿದ್ದರು. ತಳಮಟ್ಟದ ಜನರ ನಾಯಕರಾಗಿ ಮನ್ನಣೆ ಪಡೆದಿದ್ದ ಮುಲಾಯಂ ಅವರು ಉತ್ತರ ಪ್ರದೇಶ ಮತ್ತು ರಾಷ್ಟ್ರ ರಾಜಕಾರಣದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡವರು. ತುರ್ತು ಪರಿಸ್ಥಿತಿ ವೇಳೆ ಪ್ರಜಾಪ್ರಭುತ್ವದ ಸೇನಾನಿಯಾಗಿದ್ದರು. ರಕ್ಷಣಾ ಸಚಿವರಾಗಿ ಬಲಿಷ್ಠ ಭಾರತಕ್ಕಾಗಿ ಶ್ರಮಿಸಿದ್ದಾರೆ. ಜಯಪ್ರಕಾಶ್​ ನಾರಾಯಣ್​ ಮತ್ತು ಡಾ.ಲೋಹಿಯಾ ಅವರ ವಿಚಾರಧಾರೆಗಳನ್ನು ಜನಪ್ರಿಯಗೊಳಿಸಲು ಜೀವನವನ್ನ ಮುಡಿಪಾಗಿಟ್ಟಿದ್ದರು' ಎಂದು ಟ್ವೀಟ್​ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net