ಪೊಲೀಸ್ ಜೀಪ್ ಪಲ್ಟಿ: ಚಾಲಕನ ಸ್ಥಿತಿ ಗಂಭೀರ, ಪಿಎಸ್​ಐ ಪ್ರಾಣಾಪಾಯದಿಂದ ಪಾರು

New Project (8)
Published on

ಉತ್ತರ ಕನ್ನಡ: ಸಿದ್ದಾಪುರ ತಾಲೂಕಿನ ನಿಡಗೋಡ ಬಳಿ ಪೊಲೀಸ್ ಜೀಪ್ ಪಲ್ಟಿಯಾಗಿದ್ದು, ಚಾಲಕನಿಗೆ ತೀವ್ರ ಗಾಯವಾಗಿದೆ. ಪಿಎಸ್ಐ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಶಿರಸಿಯಲ್ಲಿ ನಡೆಯುತ್ತಿದ್ದ ಪೊಲೀಸ್ ದೈಹಿಕ ಪರೀಕ್ಷೆಗೆ ಜೀಪ್​ನಲ್ಲಿ ಪಿಎಸ್ಐ ಮಹಾಂತೇಶಗೆವ ಮತ್ತು ಚಾಲಕ ಯಲ್ಲಪ್ಪ ಕಾಗವಾಡ ಬರುತ್ತಿದ್ದರು. ಮಾರ್ಗಮಧ್ಯೆ ನಿಡಗೋಡ ಬಳಿ ಎದುರಿನಿಂದ ಅತಿವೇಗವಾಗಿ ಬಂದ ಬೈಕ್​ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಜೀಪ್​ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.

ತೀವ್ರವಾಗಿ ಗಾಯಗೊಂಡ ಯಲ್ಲಪ್ಪ ಕಾಗವಾಡ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ಆಸ್ಪತ್ರೆಗೆ ರವಾನಿಸಲಾಗಿದೆ. ಪಿಎಸ್ಐ ಮಹಾಂತೇಶಗೆವ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸಿದ್ದಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net