9ನೇ ತರಗತಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ: ಕೋಲಾರದಲ್ಲಿ ಪೈಶಾಚಿಕ ಕೃತ್ಯ

rape sex
Published on

ಕೋಲಾರ: ಬಂಗಾರಪೇಟೆ ತಾಲೂಕಿನಲ್ಲಿ 9ನೇ ತರಗತಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ಕಾಮುಕರು ಅಟ್ಟಹಾಸ ಮೆರೆದಿದ್ದಾರೆ. ಸಂತ್ರಸ್ತೆಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಲಾಗುತ್ತಿದ್ದು, ಈ ಸುದ್ದಿ ಕೇಳಿ ಜಿಲ್ಲೆಯ ಜನತೆ ಬೆಚ್ಚಿಬಿದ್ದಿದ್ದಾರೆ.

ಕಾಮಸಮುದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ಸಂಜೆ ಈ ಘಟನೆ ಸಂಭವಿಸಿದ್ದು, ಬಾಲಕಿಯ ಹೇಳಿಕೆ ಪಡೆದ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಶುಕ್ರವಾರ ಬಾಲಕಿಯನ್ನು ಅಪಹರಿಸಿದ ಕಾಮುಕರು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net