

ಕೋಲಾರ: ಮಗುವಿನ ನಿರೀಕ್ಷೆಯಲ್ಲಿದ್ದ ಗರ್ಭಿಣಿಯೊಬ್ಬಳು ಕೃಷಿಹೊಂಡದಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ.
ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕು ಮರಿಮಾಕನಪಲ್ಲಿ ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದೆ. ಸುಕನ್ಯಾ(22) ಮೃತ ದುರ್ದೈವಿ.
ಸುಕನ್ಯಾಗೆ ಒಂದು ವರ್ಷದ ಹಿಂದಷ್ಟೇ ಮದುವೆಯಾಗಿತ್ತು. ಸುಕನ್ಯಾ 3 ತಿಂಗಳ ಗರ್ಭಿಣಿಯಾಗಿದ್ದಳು. ಮಗುವಿನ ನಿರೀಕ್ಷೆಯಲ್ಲಿದ್ದ ಸುಕನ್ಯಾ ಕೃಷಿ ಹೊಂಡದಲ್ಲಿ ಅನುಮಾನಸ್ಪದವಾಗಿ ಮೃತಪಟ್ಟಿದ್ದು, ಸ್ಥಳಕ್ಕೆ ಬಂದ ಶ್ರೀನಿವಾಸಪುರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.